ಗಂಗಾವತಿ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರಿಗೆ ಸ್ಪೈನಲ್ ಕಾರ್ಡ್ (ಬೆನ್ನು ಹುರಿ) ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ವೈದ್ಯರು ಗಮನಸೆಳೆದಿದ್ದಾರೆ.
ಇತ್ತೀಚೆಗಷ್ಟೆ ರಾಜ್ಯದಲ್ಲಿ ಮೊದಲ ಬಾರಿಗೆ ತಾಲೂಕು ಹಂತದ ಸರ್ಕಾರಿ ಆಸ್ಪತ್ರೆಯಲ್ಲಿ ಮೊಣಕಾಲು ಚಿಪ್ಪು ಬದಲಿಸುವ (ಟೋಟಲ್ ನೀ ರಿಪ್ಲೇಸ್‌ಮೆಂಟ್) ಶಸ್ತ್ರಚಿಕಿತ್ಸೆ ಯನ್ನು ಇಲ್ಲಿನ ವೈದ್ಯರು ಮಾಡಿದ್ದರು. ಇದೀಗ ಮತ್ತೊಂದು ಹೆಜ್ಜೆ ಇಟ್ಟಿದ್ದು ಬೆನ್ನು ಹುರಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಸ್ಥಳೀಯ ನಿವಾಸಿ ಹೊಸಕೇರಪ್ಪ (54) ಎಂಬ ವ್ಯಕ್ತಿಗೆ ಇಲ್ಲಿನ ಉಪ ವಿಭಾಗ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮಾಡುತ್ತಿದ್ದು, ಇಂದು ಸಂಜೆವರೆಗೂ ಆಪರೇಷನ್ ನಡೆಯಲಿದೆ ಎಂದು ವೈದ್ಯರ ತಂಡ ತಿಳಿಸಿದೆ.