ಕೊಪ್ಪಳ: ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಧ ಡಜನ್ಗೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಸಿಎಂ ಸ್ಥಾನದ ಕುರಿತು ಹಾದಿ ಬೀದಿಯಲ್ಲಿ ಚರ್ಚಿಸುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಶಾಸಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಬಹಳ ಜನ ಸಿಎಂ ಆಕಾಂಕ್ಷಿಗಳಿದ್ದಾರೆ. ನನಗೂ ಬಹಳ ಜನ ಅಭಿಮಾನಿಗಳಿದ್ದು, ಅನೇಕರು ಪಾಟೀಲ್ರೇ ನೀವು ಸಿಎಂ ಸ್ಥಾನಕ್ಕೆ ಯೋಗ್ಯರಿದ್ದೀರಿ ಎಂದು ಹೇಳುತ್ತಾರೆ. ಆದರೆ ನಾನು ಅದನ್ನು ಹೇಳಲು ಆಗುತ್ತಾ ಎಂದು ಪ್ರಶ್ನಿಸಿದರು.
ನಮ್ಮಲ್ಲಿ ಮೂಲ, ವಲಸಿಗರೆಂಬ ಭಿನ್ನಾಭಿಪ್ರಾಯವಿಲ್ಲ. ನಮ್ಮ ಪಕ್ಷದಲ್ಲಿ ನಾಯಕರಿಗೆ ಕೊರತೆಯಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿ ಉತ್ತಮ ಆಡಳಿತ ನೀಡಿದ್ದಾರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಸನ್ಯಾಸಿಗಳಾಗಿದ್ದರೆ ಮಠದಲ್ಲಿ ಇರುತ್ತಾರೆ. ಶಾಸಕಾಂಗ ಸಭೆಯಲ್ಲಿ ಯಾರನ್ನು ಸಿಎಂ ಎಂದು ತೀರ್ಮಾನಿಸುತ್ತಾರೋ ಅವರು ಸಿಎಂ ಆಗುತ್ತಾರೆ ಎಂದರು.
ಓದಿ:ಸಿಎಂ ರೇಸ್ನಲ್ಲಿ ನೀವು ಇದ್ದೀರಾ? ಪ್ರಶ್ನೆಗೆ ಜಿ. ಪರಮೇಶ್ವರ್ ಹೇಳಿದ್ದೇನು..?