ETV Bharat / state

ಒಬ್ಬ ವಿದ್ಯಾರ್ಥಿಯ ಪರೀಕ್ಷೆಗಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತಿದ್ದು ಕೊನೆಗೂ ವ್ಯರ್ಥ! - ಏಕೈಕ ವಿದ್ಯಾರ್ಥಿ ಗಗೈರು ಹಾಜರು

ಎಸ್ಎಸ್ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಈ ಸಂದರ್ಭದಲ್ಲಿ ಓರ್ವ ವಿದ್ಯಾರ್ಥಿಯ ಬರುವಿಕೆಗಾಗಿ ಸುಮಾರು 10 ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತಿದ್ದರು.

sslc exam :  11 exam staff working for one student in koppal
ಒಬ್ಬ ವಿದ್ಯಾರ್ಥಿ ಪರೀಕ್ಷೆಗಾಗಿ ಕಾದು ಕುಳಿತ 10ಕ್ಕೂ ಹೆಚ್ಚು ಸಿಬ್ಬಂದಿ
author img

By

Published : Apr 1, 2022, 12:16 PM IST

ಕೊಪ್ಪಳ: ಎಸ್ಎಸ್ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರವೊಂದರಲ್ಲಿ ಓರ್ವ ವಿದ್ಯಾರ್ಥಿಗಾಗಿ ಸುಮಾರು ಸುಮಾರು 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆ ನಡೆದಿದೆ. ವಿದ್ಯಾರ್ಥಿ ಪರೀಕ್ಷೆಗೆ ಗೈರಾಗಿದ್ದರಿಂದ ಸಿಬ್ಬಂದಿ ಕಾದು ಕುಳಿತರೂ ಪ್ರಯೋಜನವಾಗದಂತಾಗಿದೆ. ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮೆಹಬೂಬ್ ಹುಸೇನ್ ಎಂಬ ಒಬ್ಬನೇ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಬೇಕಿತ್ತು.

ಎಸ್ಎಸ್ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಈ ಓರ್ವ ವಿದ್ಯಾರ್ಥಿ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಕೊಠಡಿ ಮೇಲ್ವಿಚಾರಕರು, ಕಚೇರಿ ಸಹಾಯಕರು, ಪರಿಚಾರಕರು, ಇಬ್ಬರು ಆಶಾ ಕಾರ್ಯಕರ್ತೆಯರು, ದೈಹಿಕ ಶಿಕ್ಷಕರು, ಓರ್ವ ಪೊಲೀಸ್ ಸಿಬ್ಬಂದಿ, ಓರ್ವ ಸ್ಥಾನಿಕ ಜಾಗೃತ ದಳದ ಅಧಿಕಾರಿ, 3 ಜನ ಫ್ಲೈಯಿಂಗ್ ಸ್ಕ್ವಾಡ್, ಮೂವರು ಮಾರ್ಗಾಧಿಕಾರಿಗಳು, ಇಬ್ಬರು ಖಜಾನೆ ಅಧಿಕಾರಿಗಳ ಕಾರ್ಯನಿರ್ವಹಣೆ ಕಾರ್ಯನಿರ್ಹಣೆಗೆ ನಿಯೋಜನೆಗೊಂಡು ಕರ್ತವ್ಯದಲ್ಲಿ ನಿರತವಾಗಿದ್ದರು.

ಆದರೆ, ಪರೀಕ್ಷೆ ಬರೆಯಬೇಕಿದ್ದ ವಿಶೇಷಚೇತನ ವಿದ್ಯಾರ್ಥಿ ಮೆಹಬೂಬ್ ಹುಸೇನ್ ಪರೀಕ್ಷಾ ಸಮಯವಾದರೂ ಬರಲಿಲ್ಲ. ಇದರಿಂದಾಗಿ ಸಿಬ್ಬಂದಿ ವಿದ್ಯಾರ್ಥಿಗಾಗಿ ಕಾದು ಕುಳಿತರು. ಆದರೆ ಆ ವಿದ್ಯಾರ್ಥಿ ಪರೀಕ್ಷೆಗೆ ಗೈರಾಗಿದ್ದು, ಸಿಬ್ಬಂದಿ ಕಾದು ಕುಳಿತರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: ಪ್ರೇಮ ವಿವಾಹವಾದ ಮಗನಿಂದ ತಂದೆ ಕೊಲೆ: ತೀರ್ಪು ಕಾಯ್ದಿರಿಸಿದ ಮಂಗಳೂರು ಕೋರ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.