ETV Bharat / state

ಗಂಗಾವತಿಯಲ್ಲಿ ಎಸ್ಸೆಸೆಲ್ಸಿ ಪರೀಕ್ಷೆಗೆ ಪೂರ್ವಸಿದ್ಧತಾ ಸಭೆ

ಈ ತಿಂಗಳ ಕೊನೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಗಂಗಾವತಿಯ ತಾಲೂಕು ಪಂಚಾಯತ್​ ಸಭಾಂಗಣದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

SSLC Exam Preparation Exam Meeting at Gangavati
ಗಂಗಾವತಿಯಲ್ಲಿ ಎಸ್ಸೆಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆ
author img

By

Published : Jun 21, 2020, 1:09 PM IST

ಗಂಗಾವತಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ರೀತಿಯ ಸಿದ್ಧತಾ ಕಾರ್ಯಗಳನ್ನು ಮಾಡಲಾಗುತ್ತಿದೆ. ಪ್ರತಿ ವಿದ್ಯಾರ್ಥಿ ಹಾಗೂ ಪೋಷಕರನ್ನು ವೈಯಕ್ತಿಕವಾಗಿ ಸಂಪರ್ಕಿಸಿ ಮಾಹಿತಿ ಕಲೆ ಹಾಕಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಹೇಳಿದರು.

ತಾಲೂಕು ಪಂಚಾಯತ್​ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಒಟ್ಟು 6,818 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಿಸಿಕೊಂಡಿದ್ದಾರೆ. ಈ ಪೈಕಿ 2,471 ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ, 2,181 ಮಕ್ಕಳು ಸ್ವಂತ ವಾಹನದಲ್ಲಿ, 1,446 ಮಕ್ಕಳು ಸಾರ್ವಜನಿಕ ವಾಹನದಲ್ಲಿ ಮತ್ತು 720 ವಿದ್ಯಾರ್ಥಿಗಳು ಖಾಸಗಿ ವಾಹನಗಳಲ್ಲಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಗಂಗಾವತಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆ

ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಈ ಪೈಕಿ ಕಂಟೇನ್​ಮೆಂಟ್​ ಝೋನ್​ದಿಂದ ಬರುವ ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆಂದು ಎರಡು ಕೇಂದ್ರಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.