ಗಂಗಾವತಿ: ಜೂನ್ 25ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಹತ್ತು ಸಾವಿರ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆ ಅಗತ್ಯ ವ್ಯವಸ್ಥೆ ಮಾಡಕೊಳ್ಳಬೇಕು ಎಂದು ಡಿವೈಎಸ್ಪಿ ಚಂದ್ರಶೇಖರ ಸಲಹೆ ನೀಡಿದ್ದಾರೆ.
ನಗರದಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಿಂದ ಪರೀಕ್ಷೆಗೆ ಕೇವಲ 2,500 ಮಕ್ಕಳು ಭಾಗಿಯಾಗಬಹುದು. ಆದರೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಪೊಲೀಸರು, ಇತರೆ ಸಿಬ್ಬಂದಿ ಹಾಗೂ ಪ್ರತಿ ವಿದ್ಯಾರ್ಥಿಯೊಂದಿಗೆ ಪಾಲಕರು ಆಗಮಿಸಲಿದ್ದಾರೆ.
ಈ ಹಿನ್ನೆಲೆ, ಹತ್ತು ಸಾವಿರ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆ ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೊಲೀಸ್ ಇಲಾಖೆಯಿಂದಲೂ ಅಗತ್ಯ ಸಹಕಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.