ಕೊಪ್ಪಳ: ಕೊರೊನಾ ಭೀತಿ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಎಬಿವಿಪಿ ಕಾರ್ಯಕರ್ತರು ನಗರದ ಪರೀಕ್ಷಾ ಕೇಂದ್ರಗಳ ಮುಂದೆ ಎಸ್ಎಸ್ಎಲ್ಸಿ ವಿಜಯೀಭವ ಅಭಿಯಾನ ನಡೆಸಿದರು.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಧರ್ಯ ತುಂಬುವ ಮಾತುಗಳನ್ನಾಡಿದರು. ಅನಗತ್ಯವಾಗಿ ಕೊರೊನಾ ಬಗ್ಗೆ ವಿದ್ಯಾರ್ಥಿಗಳು ಭಯಪಡಬಾರದು. ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೊನಾದಿಂದ ದೂರವಿರಬಹುದು. ಯಾವುದೇ ಆತಂಕಕ್ಕೆ ಒಳಗಾಗದೆ ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆ ಬರೆಯುವ ಮೂಲಕ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿಜಯಿಗಳಾಗುವಂತೆ ಕರೆ ನೀಡಿದರು.
ಈ ವೇಳೆ ಎಬಿವಿಪಿ ಮುಖಂಡರಾದ ಜಂತಕಲ್, ರವಿಚಂದ್ರ ಮಾಲಿಪಾಟೀಲ್, ರಾಕೇಶ್ ಪಾನಘಂಟಿ ಸೇರಿದಂತೆ ಮೊದಲಾದವರು ನೇತೃತ್ವ ವಹಿಸಿದ್ದರು.