ಗಂಗಾವತಿ: ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಾಲೂಕಿನ ಹೇರೂರು ಗ್ರಾಮದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಗ್ರಾಮದ ವಿವೇಕಾನಂದ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಕಲಾ ಸಾಂಸ್ಕೃತಿಕ ವೇದಿಕೆಯಿಂದ ಆಯೋಜಿಸಿರುವ ಈ ಕ್ರೀಡಾಕೂಟದಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳ 23 ತಂಡಗಳು ಹಾಗೂ ದಕ್ಷಿಣ ಕರ್ನಾಟಕದ ಏಳು ತಂಡಗಳು ಆಗಮಿಸಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ಪಂದ್ಯಾವಳಿಗೆ ಚಾಲನೆ ನೀಡಿದ ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಗುತ್ತಿಗೆದಾರ ವೀರಯ್ಯ ಹಿರೇಮಠ, ಕ್ರೀಡಾಪಟುಗಳು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾಗ ಸಮಾಜ ಅವರ ನೆರವಿಗೆ ಧಾವಿಸಬೇಕು ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ಅಮರೇಶ ಗೋನಾಳ ಇದ್ದರು.