ಗಂಗಾವತಿ(ಕೊಪ್ಪಳ): ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿಂದು ತಹಶೀಲ್ದಾರ್ ನೇತೃತ್ವದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಿದ ಕೆಲ ಗಂಟೆಗಳಲ್ಲೇ ಸ್ಥಗಿತಗೊಂಡಿದೆ.
ತೆರವು ಪ್ರಶ್ನಿಸಿ ನಾಲ್ಕು ಹೊಟೇಲ್ ಮಾಲೀಕರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಪೈಕಿ ಎರಡು ಹೊಟೇಲ್ಗಳ ವಿರುದ್ಧವಾಗಿ ಆದೇಶ ಜಾರಿಯಾದ ಹಿನ್ನೆಲೆ ತಹಶೀಲ್ದಾರ್ ನೇತೃತ್ವದಲ್ಲಿನ ತಂಡ ತೆರವು ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಕೋರ್ಟ್ನಿಂದ ಆದೇಶ ಕೈ ಸೇರದಿರುವುದು ಹಾಗೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು.
ಈ ಬಗ್ಗೆ ಮಾತನಾಡಿರುವ ತಹಶೀಲ್ದಾರ್ ಚಂದ್ರಕಾಂತ್ ಅವರು ಆದೇಶ ಕೈಸೇರಿದ ಬಳಿಕ ನಾಳೆಯಿಂದ ಮತ್ತೆ ತೆರವು ಕಾರ್ಯಾಚರಣೆ ಮುಂದುವರೆಸಲಿದ್ದೇವೆ ಎಂದು ತಿಳಿಸಿದರು.