ಗಂಗಾವತಿ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಅಂಬೇಡ್ಕರ್ ವಿದ್ಯಾರ್ಥಿ ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ, ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಇಲ್ಲಿನ ಹೊಸಳ್ಳಿ ರಸ್ತೆಯ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಕಚೇರಿಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಯಿತು.
ವಸತಿ ನಿಲಯದಲ್ಲಿ ಊಟ, ಉಪಹಾರ, ಕುಡಿವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಇದೆ. ವಾರ್ಡ್ನ ಇವುಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಎರಡು ಗಂಟೆಗಳ ನಂತರ ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪರಸಪ್ಪ ಅವರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಿ, ತರಾಟೆಗೆ ತೆಗೆದುಕೊಂಡರು. ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಲಾಯಿತು.