ಕೊಪ್ಪಳ: ಬಸ್ ಸಮಸ್ಯೆಯಿಂದ ರೋಸಿಹೋದ ತಾಲೂಕಿನ ವಿವಿಧ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಇಂದು ನಗರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ವನಬಳ್ಳಾರಿಯಿಂದ ಬರುವ ಬಸ್ನಲ್ಲಿ ಆ ಭಾಗದಿಂದ ನೂರಾರು ವಿದ್ಯಾರ್ಥಿಗಳು ಬಸ್ನಲ್ಲಿ ಜಾಗವಿಲ್ಲದೇ ಬಸ್ನ ಫೋಟ್ ಬೋರ್ಡ್ ಹಾಗೂ ಬಸ್ನ ಟಾಪ್ ಮೇಲೆ ಕುಳಿತು ಬರುತ್ತಿದ್ದು, ಇದರಿಂದ ನಿತ್ಯವೂ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ವನಬಳ್ಳಾರಿಯಿಂದ ಕೊಪ್ಪಳಕ್ಕೆ ಬರುವ ಬಸ್ನಲ್ಲಿ ಗಬ್ಬೂರು, ಕಲ್ಲತಾವರಗೇರಾ, ಹಾಲಳ್ಳಿ, ಬಸಾಪೂರ, ಕಿಡದಾಳ ಗ್ರಾಮಗಳ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಬರುತ್ತಾರೆ ಆದರೆ ಅಷ್ಟೂ ವಿದ್ಯಾರ್ಥಿಗಳಿಗೂ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದ ಕಾರಣ ಇಂದು ವಿದ್ಯಾರ್ಥಿಗಳೆಲ್ಲ ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಯಿತು. ಇದೆ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.