ಕೊಪ್ಪಳ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸುರಳ್ಕರ್ ವಿಕಾಸ ಕಿಶೋರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಈ ಮೊದಲು ಜಿಲ್ಲಾಧಿಕಾರಿಯಾಗಿದ್ದ ಪಿ. ಸುನೀಲ್‌ಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶಿಸಿತ್ತು.
ಅದರಂತೆ ಇಂದು ಸುರಳ್ಕರ್ ವಿಕಾಸ್ ಕಿಶೋರ್ ಅವರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನಿಲ್‌ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.