ಕುಷ್ಟಗಿ (ಕೊಪ್ಪಳ): ಕುಷ್ಟಗಿ ತಾಲೂಕಿನ ಯಲಬುರ್ತಿ ಗ್ರಾಮದ ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಡೆದಿದೆ. ಉಮೇಶ ನರಸಕೊಪ್ಪ (27) ಅನುಮಾನಾಸ್ಪದವಾಗಿ ಮೃತಪಟ್ಟ ಯುವಕ.
ಈತ ತನ್ನ ಇಬ್ಬರ ಸ್ನೇಹಿತರೊಂದಿಗೆ ಹಿರೇನಂದಿಹಾಳ ಡಾಬಾಕ್ಕೆ ಪಾರ್ಟಿಗೆ ಹೋಗಿದ್ದ. ಪಾರ್ಟಿ ಮುಗಿಸಿ ವಾಪಸಾಗುವಾಗ ಕುಸಿದು ಬಿದ್ದು ಅಸ್ವಸ್ಥನಾಗಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ನೇಹಿತರು ಸಹ ಇದೇ ಹೇಳಿಕೆ ನೀಡಿದ್ದಾರೆ. ಆದರೆ, ಮೃತನ ಪಾಲಕರು ತಮ್ಮ ಗಮನ ಸಾವು ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ತಮ್ಮ ಮಗ ಉಮೇಶನ 5 ಕಾಲ್ಬೆರಳು ಕತ್ತರಿಸಿವೆ, ತಲೆಗೆ ಪೆಟ್ಟು ಬಿದ್ದಿದೆ. ಇದು ಸಹಜ ಸಾವಲ್ಲ, ಕೊಲೆ ಎಂದು ಶಂಕಿಸಿದ್ದಾರೆ. ಈ ಹಿನ್ನೆಲೆ ಉಮೇಶನ ಜೊತೆಗಿದ್ದ ಇಬ್ಬರು ಯುವಕರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತನಿಖೆ ಹಿನ್ನೆಲೆ ಅನುಮಾನಾಸ್ಪದ ಸಾವು ಪ್ರರಕಣವೆಂದು ಠಾಣೆಯಲ್ಲಿ ದೂರು ದಾಖಲಾಗಿದೆ.