ಕೊಪ್ಪಳ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಜಿ. ಸಂಗೀತಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ನೂತನ ಎಸ್ಪಿಯಾಗಿ ಟಿ. ಶ್ರೀಧರ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ರಾಜ್ಯ ಗುಪ್ತಚರ ವಿಭಾಗದ ಎಸ್ಪಿ ಆಗಿದ್ದ 2012ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಟಿ. ಶ್ರೀಧರ ಅವರನ್ನು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಇಂದು ಆದೇಶ ಹೊರಡಿಸಿದೆ. ಕೊಪ್ಪಳದಿಂದ ವರ್ಗಾವಣೆಯಾಗಿರುವ ಜಿ. ಸಂಗೀತಾ ಅವರಿಗೆ ಯಾವುದೇ ಜವಾಬ್ದಾರಿ ನೀಡದೆ ವರ್ಗಾವಣೆಗೆ ಮಾಡಲಾಗಿದೆ.