ETV Bharat / state

ಗಂಗಾವತಿಯ ಮಸಾರಿಕ್ಯಾಂಪ್‌ಗೆ ರಸ್ತೆ ಸಂಪರ್ಕ: ಅಧಿಕಾರಿಗಳ ಭೇಟಿ, ಪರಿಶೀಲನೆ - Gangavati latest news

ತಾಲೂಕಿನ ಮಸಾರಿಕ್ಯಾಂಪ್ ಗ್ರಾಮಕ್ಕೆ ಯಾವುದೇ ರಸ್ತೆ ಸಂಪರ್ಕ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ರಸ್ತೆ ಸಂಪರ್ಕ ಕಲ್ಪಿಸಲು ಇರುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸಿತು.

Gangavati
Gangavati
author img

By

Published : Oct 7, 2020, 3:26 PM IST

ಗಂಗಾವತಿ : ತಾಲೂಕಿನ ಮಸಾರಿಕ್ಯಾಂಪ್ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಇರುವ ಸಾಧ್ಯತೆ ಕುರಿತು ಪರಿಶೀಲನೆ ನಡೆಸಲು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿತು.

ಮಸಾರಿಕ್ಯಾಂಪ್ (ಗುಳದಳ್ಳಿ) ಗ್ರಾಮಕ್ಕೆ ತುಂಗಭದ್ರಾ ಎಡದಂಡೆ ಕಾಲುವೆ ಮೇಲಿರುವ ರಸ್ತೆಯ ಮೂಲಕ ಮಾತ್ರ ಗ್ರಾಮಕ್ಕೆ ಪ್ರವೇಶಿಸಲು ಸಾಧ್ಯವಿದೆ. ಅದನ್ನು ಬಿಟ್ಟರೆ ಗ್ರಾಮಕ್ಕೆ ಬೇರೆ ದಾರಿಯಿಲ್ಲ. ಮಳೆಗಾಲ ಬಂದರೆ ಕಾಲುವೆ ಮೇಲಿನ ರಸ್ತೆ ಸಂಪೂರ್ಣ ಹಾಳಾಗಿ ನಡೆದಾಡಲು ಕಷ್ಟಕರವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿರುವ ಜನರು ಬಹುತೇಕ ಬಾಹ್ಯ ಸಂಪರ್ಕ ಕಳೆದುಕೊಳ್ಳುವಂತಹ‌ ಪರಿಸ್ಥಿತಿ ಇದೆ. ಹೀಗಾಗಿ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಇರುವ ಸಾಧ್ಯತೆಗಳ ಪರಿಶೀಲನೆಗೆ ತಹಶೀಲ್ದಾರ್ ರೇಣುಕಾ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.