ಕೊಪ್ಪಳ: ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಣೆಯಲ್ಲಿ ಆನೆಗುಂದಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ಎನ್ನುವುದನ್ನು ಕೈಬಿಟ್ಟು 28- ಚಿಕ್ಕಜಂತಕಲ್ (ಆನೆಗುಂದಿ) ಎಂದು ಮರುನಾಮಕರಣ ಮಾಡಿರುವುದನ್ನು ಖಂಡಿಸಿ ನಡೆಯತ್ತಿದ್ದ ಸಭೆಯಲ್ಲಿ ತಾಪಂ ಮಾಜಿ ಸದಸ್ಯರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿಯ ಶ್ರೀರಂಗನಾಥ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಹೆಸರನ್ನು ಬದಲಾಯಿಸಿರುವ ಸರ್ಕಾರದ ಕ್ರಮ ಖಂಡಿಸಿ ಸಭೆ ಕರೆಯಲಾಗಿತ್ತು. ಸರ್ಕಾರ ಮತ್ತು ಸ್ಥಳೀಯ ಶಾಸಕರ ನಿರ್ಲಕ್ಷ್ಯದ ನಡೆ ವಿರುದ್ಧ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತಪಡಿಸಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದರು.
ಓದಿ: ಏಪ್ರಿಲ್ ಫೂಲ್ ಎಂದು ನೆರವಿಗೆ ಬಾರದ ಗ್ರಾಮಸ್ಥರು: ವಿಷ ಸೇವಿಸಿದ್ದ ಬಾಲಕಿ ಸಾವು
ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ತಾಪಂ ಮಾಜಿ ಸದಸ್ಯ ಪ್ರವೀಣ ಕುಮಾರ್ ಎಂಬುವವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.