ಗಂಗಾವತಿ: ತಾಲೂಕಿನ ಬಸವಪಟ್ಟಣ ಗ್ರಾಮದ ಬಂಜಾರ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈಚೆಗೆ ಶಿಕ್ಷಣ ಇಲಾಖೆ ಆರಂಭಿಸಿದ್ದ ವಠಾರಪಾಠ ಎಂಬ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಸರ್ಕಾರಿ ಉಪ ವಿಭಾಗದ ಆಸ್ಪತ್ರೆಯ ಕೋವಿಡ್ ವಾರ್ಡ್ಗೆ ದಾಖಲಿಸಲಾಗಿತ್ತು.