ಕೊಪ್ಪಳ: ಕಡಿಮೆ ರಕ್ತದೊತ್ತಡದಿಂದ ಕರ್ತವ್ಯನಿರತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಒಬ್ಬರು ಸಾವನ್ನಪ್ಪಿದ ಘಟನೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದಿದೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಶ್ವನಾಥ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ.
ಮೂಲತ: ರಾಯಚೂರು ಜಿಲ್ಲೆಯ ಗೆಜ್ಜಲಗಟ್ಟೆಯವರಾದ ವಿಶ್ವನಾಥ್ ಕಳೆದ ಸುಮಾರು 15 ವರ್ಷಗಳಿಂದ ವಿವಿಧ ಇಲಾಖೆಗಳಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದಾರೆ.