ETV Bharat / state

ಪ್ರಾಥಮಿಕ ಶಿಕ್ಷಣಕ್ಕೆ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ: ಶಾಸಕ ಬಯ್ಯಾಪೂರ ಕಳವಳ - ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ

ಪ್ರಾಥಮಿಕ ಶೈಕ್ಷಣಿಕ ಹಂತದಲ್ಲಿ ಪಠ್ಯ ಪುಸ್ತಕ, ಸಮವಸ್ತ್ರ, ಶೂ, ಬಿಸಿ ಊಟ, ಸೈಕಲ್ ಇತ್ಯಾದಿ ಸವಲತ್ತುಗಳು ಮುಖ್ಯವಾಗುವುದಿಲ್ಲ. ಶೈಕ್ಷಣಿಕ ಗುಣಮಟ್ಟ ಹೆಚ್ಚಬೇಕಿದ್ದು, ಪ್ರಾಥಮಿಕ ಶಿಕ್ಷಣಕ್ಕೆ ಪ್ರಾಮುಖ್ಯತೆ ಸಿಗಬೇಕಿದೆ ಎಂದು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದ್ದಾರೆ.

teachers day in kushtagi
ಕುಷ್ಟಗಿಯಲ್ಲಿ ಶಿಕ್ಷಕರ ದಿನಾಚರಣೆ
author img

By

Published : Sep 6, 2020, 1:10 PM IST

ಕುಷ್ಟಗಿ(ಕೊಪ್ಪಳ): ಪ್ರಾಥಮಿಕ ಶಿಕ್ಷಣಕ್ಕೆ ಆದ್ಯತೆ ನೀಡದೇ ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಕಳವಳ ವ್ಯಕ್ತಪಡಿಸಿದರು.

ಬಸವ ಭವನದಲ್ಲಿ ತಾಲೂಕು ಆಡಳಿತ, ತಾ.ಪಂ., ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ 132ನೇ ಜನ್ಮ ದಿನಾಚರಣೆ ಅಂಗವಾಗಿ ಕುಷ್ಟಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಕಡೆಗಣಿಸುತ್ತಿರುವ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಿರುವೆ. ಸಂಬಂಧಿಸಿದ ಸಚಿವರಿಗೆ ಪತ್ರ ಬರೆದಿರುವೆ ಎಂದಿದ್ದಾರೆ.

ಪ್ರಾಥಮಿಕ ಶೀಕ್ಷಣದ ಬಗ್ಗೆ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿಕೆ

ಪ್ರಾಥಮಿಕ ಶಿಕ್ಷಣವನ್ನು ಶಿಕ್ಷಣದ ಅಡಿಪಾಯ ಎಂದು ಹೇಳಲಾಗುತ್ತಿದೆ ಹೊರತು ಅಡಿಪಾಯ ಗಟ್ಟಿಗೊಳಿಸಲು ಸರ್ಕಾರದಿಂದಾಗುತ್ತಿಲ್ಲ. ಸರ್ಕಾರ ಪಿಯು, ಪದವಿ, ಸ್ನಾತಕೋತ್ತರ ಶಿಕ್ಷಣಕ್ಕೆ ಒತ್ತು ನೀಡುವುದಕ್ಕಿಂತ ಪ್ರಾಥಮಿಕ ಹಂತಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ. ಪ್ರಾಥಮಿಕ ಶಾಲೆಗಳ ಶಿಕ್ಷಕರ ಕೊರತೆಯನ್ನು ಸರ್ಕಾರ ನೀಗಿಸುವ ಪ್ರಯತ್ನ ಮಾಡಿಲ್ಲವೆಂದು ಕಳವಳ ವ್ಯಕ್ತಪಡಿಸಿದರು.

ಪ್ರಾಥಮಿಕ ಶೈಕ್ಷಣಿಕ ಹಂತದಲ್ಲಿ ಪಠ್ಯ ಪುಸ್ತಕ, ಸಮವಸ್ತ್ರ, ಶೂ, ಬಿಸಿ ಊಟ, ಸೈಕಲ್ ಇತ್ಯಾದಿ ಸವಲತ್ತುಗಳು ಮುಖ್ಯವಾಗುವುದಿಲ್ಲ. ಶೈಕ್ಷಣಿಕ ಗುಣಮಟ್ಟ ಹೆಚ್ಚಬೇಕಿದ್ದು, ಪ್ರಾಥಮಿಕ ಶಿಕ್ಷಣಕ್ಕೆ ಪ್ರಾಮುಖ್ಯತೆ ಸಿಗಬೇಕಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.