ಗಂಗಾವತಿ: ವಿದೇಶಿ ಪ್ರವಾಸಿಗರ ನೆಚ್ಚಿನ ತಾಣವಾದ ವಿರುಪಾಪುರಗಡ್ಡೆಯಲ್ಲಿನ ಹೋಟೆಲ್ವೊಂದರಲ್ಲಿ ಯುವಕನೋರ್ವ ಸಾವನ್ನಪ್ಪಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ವಿರುಪಾಪುರಗಡ್ಡೆಯಲ್ಲಿನ ಗೋವನ್ ಕಾರ್ನರ್ ಎಂಬ ರೆಸ್ಟೋರೆಂಟ್ನಲ್ಲಿ ಸೀನಿಯರ್ ಕುಕ್ ಆಗಿ ಕೆಲಸ ಮಾಡುತ್ತಿದ್ದ ಅರುಣಾಚಲ ಪ್ರದೇಶ ಮೂಲದ ಮಹೇಂದರ್ ಚೊಬ್ಲೆ (21) ಎಂಬಾತನೆ ಮೃತ ಯುವಕ. ಈತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಯವಕ ಕೇವಲ ಎರಡು ತಿಂಗಳ ಹಿಂದಷ್ಟೆ ಗೋವನ ಕಾರ್ನರ್ ಹೋಟೆಲ್ನಲ್ಲಿ ಕೆಲಸಕ್ಕೆಂದು ಸೇರಿಕೊಂಡಿದ್ದ ಎನ್ನಲಾಗಿದೆ, ಮರಣೋತ್ತರ ಪರೀಕ್ಷೆಗಾಗಿ ಮೃತನ ಪಾರ್ಥಿವ ಶರೀರವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ದೂರು ದಾಖಲಾಗಿದೆ.