ETV Bharat / state

ಗಂಗಾವತಿಯಲ್ಲಿ ಟೀ ಮಾರುವ ವ್ಯಕ್ತಿ ಸೇರಿ ಮೂವರಿಗೆ ಕೊರೊನಾ... ಆತಂಕದಲ್ಲಿ ಜನ - latest corona news ]

ಗಂಗಾವತಿಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿಂದು ಮೂರು ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಇವರಲ್ಲಿ ಟೀ ಮಾರು ವ್ಯಕ್ತಿಗೆ ಕೊರೊನಾ ದೃಢಪಟ್ಟಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.

gangavati
ಗಂಗಾವತಿಯಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ
author img

By

Published : Jun 16, 2020, 1:44 PM IST

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ನಗರ ಪ್ರದೇಶದ ಇಬ್ಬರು ಹಾಗೂ ಗ್ರಾಮೀಣ ಭಾಗದ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಇಲ್ಲಿನ ಪ್ರದೇಶಗಳನ್ನು ಸೀಲ್​ಡೌನ್​ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.

ಶ್ರೀರಾಮನಗರದ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಇರುವ ಬೀಡಾ ಅಂಗಡಿಯ ಚಹಾ ಮಾರಾಟಗಾರನಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಆರೋಗ್ಯ, ಕಂದಾಯ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರದೇಶವನ್ನು ಸೀಲ್​ಡೌನ್​​ ಮಾಡಿದ್ದಾರೆ.

ನಗರದ ಪೀರಜಾಧೆ ರಸ್ತೆಯ ಹಿಂಭಾಗದ ನಿವಾಸಿ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಇದೀಗ ಏರಿಯಾವನ್ನು ಸೀಲ್​ಡೌನ್​ ಮಾಡಲಾಗುತ್ತಿದೆ. ಅಲ್ಲದೇ ಕ್ವಾರಂಟೈನ್ನಲ್ಲಿರುವ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೂ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.