ಗಂಗಾವತಿ: ನಗರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇದೀಗ ಇಲ್ಲಿನ ಉಪ ವಿಭಾಗ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆಯನ್ನು ದ್ವಿಗುಣಗೊಳಿಸಲಾಗಿದೆ.
ಈ ಮೊದಲು ಅಂದರೆ ಲಾಕ್‌ಡೌನ್ ಸಂದರ್ಭದಲ್ಲಿ ಕೇವಲ ಹತ್ತಿಪ್ಪತ್ತರ ಗಡಿಯಲ್ಲಿದ್ದ ಗಂಟಲು ದ್ರವ ಪರೀಕ್ಷೆ, ರಾಜ್ಯದಲ್ಲಿ ಲಾಕ್‌ಡೌನ್ ಸಡಿಲವಾದ ಬಳಿಕ ದಿನಕ್ಕೆ ಸುಮಾರು ನೂರಕ್ಕೂ ಹೆಚ್ಚಿನ ಜನರನ್ನು ಪರೀಕ್ಷಿಸಲಾಗುತ್ತಿತ್ತು.
ಆದರೆ, ಕಳೆದ ಎರಡು ವಾರದಲ್ಲಿ ಗಂಗಾವತಿ ನಗರದಲ್ಲಿ ನಿತ್ಯ ಒಂದು, ಎರಡು ಕೊರೊನಾ ಪ್ರಕರಣ ಪತ್ತೆಯಾಗುತ್ತಿರುವ ಹಿನ್ನೆಲೆ ಇದೀಗ ಈ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದ್ದು, ನಿತ್ಯ 150 ರಿಂದ 200 ರ ಗಡಿ ದಾಟುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.