ಕೊಪ್ಪಳ: ವಶಕ್ಕೆ ಪಡೆದಿದ್ದ ಅಪಾರ ಪ್ರಮಾಣದ ತಂಬಾಕು ಉತ್ಪನ್ನಗಳನ್ನು ಕೊಪ್ಪಳ ನಗರಸಭೆ ಸಿಬ್ಬಂದಿ ನಾಶಪಡಿಸಿದ್ದಾರೆ.
ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದೆ. ಆದರೂ ಆದೇಶ ಮೀರಿ ಕೆಲ ಅಂಗಡಿಗಳಲ್ಲಿ ಹೆಚ್ಚಿನ ಬೆಲೆಗೆ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿತ್ತು.
ಈ ಬಗ್ಗೆ ಮಾಹಿತಿ ಪಡೆದ ನಗರಸಭೆ ಆಯುಕ್ತ ಮಂಜುನಾಥ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡದುಕೊಂಡಿದ್ದರು.