ETV Bharat / state

ಅಧಿಕಾರಿಗಳ ಕಿರುಕುಳ ತಪ್ಪಿಸಿ: ಶಾಸಕರ ಮುಂದೆ ಅಳಲು ತೋಡಿಕೊಂಡ ಅಕ್ಕಿ ಮಿಲ್​​ ಮಾಲೀಕರು - ಗಂಗಾವತಿ

ಆಹಾರ ಇಲಾಖೆಯ ಅಧಿಕಾರಿಗಳು ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ. ಈ ಸಮಸ್ಯೆಯಿಂದ ಮುಕ್ತಿ ಕೊಡಿ ಎಂದು ಅಕ್ಕಿ ಮಿಲ್​ ಮಾಲೀಕರು ಶಾಸಕ ಪರಣ್ಣ ಮುನವಳ್ಳಿ ಅವರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಸಚಿವರ ಮುಂದೆ ಅಳಲು ತೋಡಿಕೊಂಡ ಅಕ್ಕಿ ಗಿರಣಿ ಮಾಲೀಕರು

author img

By

Published : May 27, 2020, 12:31 PM IST

ಕೊಪ್ಪಳ (ಗಂಗಾವತಿ): ಆಹಾರ ಇಲಾಖೆಯ ಅಧಿಕಾರಿಗಳು ವಿನಾ ಕಾರಣ ಕಿರುಕುಳ ನೀಡಿ ಶೋಷಣೆ ಮಾಡುತ್ತಿದ್ದಾರೆ. ಕಿರುಕುಳ ತಪ್ಪದೇ ಹೋದರೆ ರಾಜ್ಯಾದ್ಯಂತ ಅಕ್ಕಿ ಮಿಲ್​ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಲೀಕರು ತಿಳಿಸಿದ್ದಾರೆ.

ಅಕ್ಕಿ ಮಿಲ್​​ ಮಾಲಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಶಾಸಕ ಪರಣ್ಣ ಮುನವಳ್ಳಿ ಅವರನ್ನು ಭೇಟಿಯಾದ ಮಿಲ್ ಮಾಲೀಕರು, ಆಹಾರ ಇಲಾಖೆಯ ಅಧಿಕಾರಿಗಳು ನೀಡುತ್ತಿರುವ ಮಾನಸಿಕ ಕಿರುಕುಳದ ಬಗ್ಗೆ ಮಾಹಿತಿ ನೀಡಿದರು.

ಈ ಬಗ್ಗೆ ಮಾತನಾಡಿದ ಮುಖಂಡ ಕೆ.ಕಾಳಪ್ಪ, ಮುಕ್ತ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಿ ಮಿಲ್ಲಿಂಗ್ ಮಾಡಲಾಗುತ್ತಿದೆ. ಇದಕ್ಕೆ ಶೇ. 67ರಷ್ಟು ತೆರಿಗೆ ರೂಪದ ಅಕ್ಕಿ ಲೇವಿ ಕೊಡಬೇಕು. ಅದಕ್ಕೆ ಬ್ಯಾಂಕ್ ಗ್ಯಾರಂಟಿ ಕೊಡಬೇಕು ಎಂದು ಒತ್ತಡ ತರುತ್ತಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಪರಣ್ಣ ಮುನವಳ್ಳಿ, ಕೂಡಲೇ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಗೋಪಾಲಯ್ಯ ಅವರನ್ನು ಸಂಪರ್ಕಿಸಿ ಮಿಲ್ಲರ್ಸ್​ ಸಮಸ್ಯೆ ವಿವರಿಸಿದರು. ಈ ವೇಳೆ ಅಕ್ಕಿ ಮಿಲ್​ ಮಾಲೀಕರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.