ETV Bharat / state

ತುಂಗಭದ್ರಾ ಜಲಾಶಯದಲ್ಲಿ ಒಂದೇ ದಿನ 4 ಟಿಎಂಸಿ ನೀರು ಹೆಚ್ಚಳ

author img

By

Published : Jun 21, 2021, 1:00 PM IST

ಕೊಪ್ಪಳದ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ಅವಧಿಗೂ ಮುನ್ನ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ.

Tungabhadra Reservoir
ತುಂಗಭದ್ರಾ ಜಲಾಶಯ

ಕೊಪ್ಪಳ : ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ಒಂದೇ ದಿನ ಜಲಾಶಯಕ್ಕೆ ಸುಮಾರು 4 ಟಿಎಂಸಿ ನೀರು ಹರಿದು ಬಂದಿದೆ. ಇದೇ ರೀತಿ ಒಳಹರಿವಿನ ಪ್ರಮಾಣ ಹೆಚ್ಚಾದರೆ ಈ ಬಾರಿ ಅವಧಿಗೂ ಮುನ್ನ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 1,633 ಅಡಿ, ಇಂದಿನ ಮಟ್ಟ 1600.35 ಅಡಿ ಇದೆ‌. 100.86 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 20.170 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಈ ದಿನದಂದು 6.404 ಟಿಎಂಸಿ ನೀರು ಸಂಗ್ರಹವಾಗಿತ್ತು.

ತುಂಗಭದ್ರಾ ಜಲಾಶಯ

ಇಂದು 46,250 ಕ್ಯೂಸೆಕ್​ ಒಳಹರಿವು ಇದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಒಂದೇ ದಿನದಲ್ಲಿ 4 ಟಿಎಂಸಿ ನೀರು ಸಂಗ್ರಹಗೊಂಡಿದೆ. ಹೀಗಾಗಿ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜನರಲ್ಲಿ ಆಶಾಭಾವನೆ ಮೂಡಿದೆ.

ಇದನ್ನೂ ಓದಿ : ಕೆಆರ್‌ಎಸ್​​ನಲ್ಲಿ ಹೆಚ್ಚಿದ ಒಳಹರಿವು: ನಾಲೆಗಳಿಗಿಲ್ಲ, ನದಿಗೆ 5000 ಕ್ಯೂಸೆಕ್​ ನೀರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.