ETV Bharat / state

ಕುಷ್ಟಗಿ: ವಿಷ ಸೇವಿಸಿ ಇಬ್ಬರು ಆತ್ಮಹತ್ಯೆ - ಈಟಿವಿ ಭಾರತ ಕನ್ನಡ

ಕುಷ್ಟಗಿಯಲ್ಲಿ ಓರ್ವ ಪುರುಷ ಮತ್ತು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಷ ಸೇವಿಸಿ ಇಬ್ಬರು ಆತ್ಮಹತ್ಯೆ
ವಿಷ ಸೇವಿಸಿ ಇಬ್ಬರು ಆತ್ಮಹತ್ಯೆ
author img

By

Published : May 31, 2023, 12:08 PM IST

ಕೊಪ್ಪಳ: ವಿಷ ಸೇವಿಸಿ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿಯಲ್ಲಿ ನಡೆದಿದೆ. ಮಾಲಗಿತ್ತಿ ಗ್ರಾಮದ ಪೀರಸಾಬ (35), ಶಾರವ್ವ (30) ಸಾವಿಗೀಡಾದವರು ಎಂದು ಗುರುತಿಸಲಾಗಿದೆ. ಇಬ್ಬರಿಗೂ ತಲಾ ಮೂರು ಜನ ಮಕ್ಕಳಿದ್ದಾರೆ.

ಇತ್ತೀಚಿಗೆ ಪೀರಸಾಬ ಪತ್ನಿ ಮೃತ ಶಾರವ್ವಳೊಂದಿಗೆ ಜಗಳವಾಡಿದ್ದಳು. ಗ್ರಾಮದ ಹಿರಿಯರು ಮಧ್ಯಸ್ಥಿಕೆ ವಹಿಸಿ ಇಬ್ಬರಿಗೂ ತಿಳುವಳಿಕೆ ಹೇಳಿದ್ದರಂತೆ. ನಿನ್ನೆ ಸಂಜೆ ಪೀರಸಾಬ ಹೊಲದಲ್ಲಿ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹನುಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ವ್ಯಕ್ತಿ ಕೊಲೆ: ಇತ್ತೀಚೆಗೆ ವಿಜಯಪುರದಲ್ಲಿ ನಡೆದ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆ ಮಹಿಳೆಯರ ಸಂಬಂಧಿಕರು ಹತ್ಯೆ ಮಾಡಿದ್ದರು. ಈ ಘಟನೆ ಬಸವನ ಬಾಗೇವಾಡಿ ತಾಲೂಕಿನ ಹತ್ತರಕಿಹಾಳ ಗ್ರಾಮದಲ್ಲಿ ನಡೆದಿತ್ತು. ಹತ್ತರಕಿಹಾಳ ಗ್ರಾಮದ ಸಂಗಪ್ಪ ಭೀಮಪ್ಪ ಹೂಗಾರ (28) ಎಂಬವರನ್ನು ಹತ್ಯೆ ಮಾಡಲಾಗಿತ್ತು. ಮೃತ ಸಂಗಪ್ಪ ತನ್ನ ಮನೆಯಲ್ಲಿ ವಿವಾಹಿತ ಮಹಿಳೆಯೊಂದಿಗೆ ಇರುವಾಗ ಸಂಬಂಧಿಕರ ಕೈಗೆ ಸಿಕ್ಕಿ‌ ಹಾಕಿಕೊಂಡಿದ್ದ. ಇದರಿಂದ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಸಂಗಪ್ಪನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿದ್ದರು ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹತ್ಯೆಯಾದ ಸಂಗಪ್ಪ ಕೂಡ ಮದುವೆಯಾಗಿದ್ದನು. ಆದರೂ ಅದೇ ಗ್ರಾಮದ ಮಹಿಳೆಯ ಜತೆ ವಿವಾಹೇತರ ಸಂಬಂಧ ಹೊಂದಿದ್ದನಂತೆ.‌ ಸಂಗಪ್ಪ ಮಹಿಳೆಯ ಜತೆ ತನ್ನ ಮನೆಯಲ್ಲಿದ್ದ ವಿಷಯ ಮಹಿಳೆಯ ಸಂಬಂಧಿಕರಿಗೆ ಗೊತ್ತಾಗಿತ್ತು. ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಸಂಗಪ್ಪನಿಗೆ ಬಡಿಗೆಯಲ್ಲಿ ಹಲ್ಲೆ ಮಾಡಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ ಸಾವನ್ನಪ್ಪಿದ್ದರ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಹೆಂಡತಿ ಮಕ್ಕಳಿಗೆ ಬೆಂಕಿ ಹಚ್ಚಿ ಪತಿಯ ಕ್ರೌರ್ಯ : ತುಮಕೂರಿನಲ್ಲಿ ಕೆಲವು ದಿನಗಳ ಹಿಂದೆ ನಡೆದ ಘಟನೆಯಲ್ಲಿ ವ್ಯಕ್ತಿಯೋರ್ವ ತನ್ನ ಹೆಂಡತಿ ಮಕ್ಕಳಿಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆದಿದ್ದ. ಪತ್ನಿ ಮೇಲೆ ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಹೆಂಡತಿ, ಮಕ್ಕಳಿಗೆ ಬೆಂಕಿ ಹಚ್ಚಿದ್ದನು. ಈ ಘಟನೆ ತುಮಕೂರು ಜಿಲ್ಲೆ‌ಯ ಮಧುಗಿರಿ ತಾಲೂಕಿನ ಮುದ್ದನೇರಳೆಕೆರೆ ಗ್ರಾಮದಲ್ಲಿ ನಡೆದಿತ್ತು. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ, ಹೆಂಡತಿ ಮಕ್ಕಳು ಪ್ರಾಣಾಪಾಯದಿಂದ ಪಾರಾಗಬಾರದೆಂದು ಬೆಂಕಿ ಹಚ್ಚಿ ಕೋಣೆಗೆ ಬೀಗ ಹಾಕಿ ಪರಾರಿಯಾಗಿದ್ದ.

ಘಟನೆಯಲ್ಲಿ ಪತ್ನಿ ಶಾಂತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದರು. 17 ವರ್ಷ, 13 ವರ್ಷ ಹಾಗೂ 10 ವರ್ಷ ವಯಸ್ಸಿನ ಮೂವರು ಹೆಣ್ಣು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿತ್ತು. ಬೆಂಕಿ‌ ಹಚ್ಚಿ ಪರಾರಿಯಾಗಿದ್ದ ಆರೋಪಿ ರಾಮಾಂಜಿಯನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ಮನೆಯಲ್ಲೇ ಯುವಕ ಶವವಾಗಿ ಪತ್ತೆ.. ಕೊಲೆ ಶಂಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.