ಗಂಗಾವತಿ: ತಾಲೂಕಿನ ಆನೆಗೊಂದಿಯಲ್ಲಿ ಜನವರಿ 9 ಮತ್ತು 10 ರಂದು ಎರಡು ದಿನಗಳ ಕಾಲ ನಡೆಯುವ ಆನೆಗೊಂದಿ ಉತ್ಸವಕ್ಕೆ ಸರ್ಕಾರ ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ನಗರದ ಮಂಥನ ಸಭಾಂಗಣದಲ್ಲಿ ಕರೆಯಲಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜ.9 ಕ್ಕೆ ಉತ್ಸವಕ್ಕೆ ಸಿ.ಎಂ. ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಸೇರಿದಂತೆ ಇನ್ನಿತರೆ ಸಚಿವರು ಪಾಲ್ಗೊಳ್ಳಲಿದ್ದಾರೆ. ಖ್ಯಾತ ನಟ ಯಶ್ ಅಥವಾ ಸುದೀಪ್ ಈ ಇಬ್ಬರ ಪೈಕಿ ಒಬ್ಬರು ಉತ್ಸವಕ್ಕೆ ಆಗಮಿಸಲಿದ್ದಾರೆ ಎಂದು ಶಾಸಕ ಹೇಳಿದರು.