ETV Bharat / state

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ವಾಹನಗಳು ವಶಕ್ಕೆ: ಚಾಲಕರು ಪರಾರಿ - ಕೊಪ್ಪಳದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಸುದ್ದಿ

ಕೊಪ್ಪಳದ ಮುದ್ದಾಬಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನು ವಾಹನಗಳ ಚಾಲಕರು ಪರಾರಿಯಾಗಿದ್ದಾರೆ.

ಅಕ್ರಮ ಪಡಿತರ ಅಕ್ಕಿ ಸಾಗಾಟ
author img

By

Published : Oct 22, 2019, 9:00 AM IST

ಕೊಪ್ಪಳ: ತಾಲೂಕಿನ ಮುದ್ದಾಬಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ವಾಹನಗಳನ್ನು ಜಪ್ತಿ ಮಾಡಲಾಗಿದೆ.

ತಹಶಿಲ್ದಾರ್​ ಜೆ.ಬಿ. ಮಜ್ಜಗಿ ಹಾಗೂ ಗ್ರಾಮೀಣ ಠಾಣೆಯ ಪಿಎಸ್ಐ ಸುರೇಶ್​ ನೇತೃತ್ವದ ತಂಡ ರಾತ್ರಿ ದಾಳಿ‌ ನಡೆಸಿದೆ. ಈ ವೇಳೆ ಎರಡು ವಾಹನಗಳಲ್ಲಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ, ಎರಡು ವಾಹನಗಳು ವಶಕ್ಕೆ

ಎರಡು ವಾಹನಗಳಲ್ಲಿ 235 ಬ್ಯಾಗ್​ಗಳಲ್ಲಿ ಸುಮಾರು 50 ಕೆಜಿ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಹೊಸಗೊಂಡಬಾಳದಿಂದ ಈ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗ್ತಿದೆ.

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಚಾಲಕರು ಪರಾರಿಯಾಗಿದ್ದಾರೆ. ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಕೊಪ್ಪಳ:- ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಎರಡು ವಾಹನಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ. ತಾಲೂಕಿನ ಮುದ್ದಾಬಳ್ಳಿ ಕ್ರಾಸ್ ಬಳಿ ತಹಸೀಲ್ದಾರ ಜೆ.ಬಿ. ಮಜ್ಜಗಿ ಹಾಗೂ ಗ್ರಾಮೀಣ ಠಾಣೆಯ ಪಿಎಸ್ಐ ಸುರೇಶ ನೇತೃತ್ವದಲ್ಲಿ ರಾತ್ರಿ ದಾಳಿ‌ ನಡೆಸಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಲಾರಿಗಳಲ್ಲಿ ಸಾಗಿಸಲಾಗುತ್ತಿದ್ದ 50 ಕೆ.ಜಿ. ತೂಕದ ಒಟ್ಟು 235 ಬ್ಯಾಗ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಹೊಸಗೊಂಡಬಾಳದಿಂದ ಈ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗುತ್ತಿದ್ದು ಲಾರಿ ಚಾಲಕರು ಪರಾರಿಯಾಗಿದ್ದಾರೆ. ಲಾರಿ ಚಾಲಕರ ಹಾಗೂ ಮಾಲೀಕರ ವಿರುದ್ಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.