ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯದವರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಒಂದು ಸಮುದಾಯವದರು ಮತ್ತೊಂದು ಸಮುದಾಯದವರ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಕಾರಟಗಿ ತಾಲೂಕಿನ ಹಗೇದಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆ ಮಾಡುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಈ ಗಲಾಟೆಯಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕಾರಟಗಿ ಠಾಣೆಯ ಪೊಲೀಸರು ಹಗೇದಾಳ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘಟನೆ ಮುಖಂಡ ಮಲ್ಲಿಕಾರ್ಜುನ ಪೂಜಾರ ಹೇಳಿದ್ದಾರೆ.