ETV Bharat / state

ವಾಲ್ಮಿಕಿ ಸಮುದಾಯಕ್ಕೆ ಶೇ.7.5 ಮೀಸಲಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಶೇ.7.5 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಕುಷ್ಟಗಿಯಲ್ಲಿ ವಾಲ್ಮೀಕಿ ಸಮುದಾಯ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಿದೆ.

author img

By

Published : Oct 21, 2020, 4:34 PM IST

valmiki community protests
ಶೇ.7.5 ಮೀಸಲಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಕುಷ್ಟಗಿ(ಕೊಪ್ಪಳ): ನ್ಯಾ. ನಾಗಮೋಹನ ದಾಸ್​​ ಆಯೋಗದ ವರದಿಯಂತೆ ವಾಲ್ಮೀಕಿ ಸಮುದಾಯಕ್ಕೆ ಶಿಕ್ಷಣ, ಉದ್ಯೋಗದಲ್ಲಿ ಶೆ.7.5 ಮೀಸಲಾತಿಗೆ ಆಗ್ರಹಿಸಿ ಸತ್ಯಾಗ್ರಹ ನಡೆಸಲಾಯ್ತು.

ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ್ ನಾಯಕ್ ನೇತೃತ್ವದಲ್ಲಿ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಸತ್ಯಾಗ್ರಹ ನಡೆಯಿತು. ಈ ಸಮಾಜವನ್ನು ಮುಖ್ಯವಾಹಿನಿಗೆ ತರಲು ಹೋರಾಟ ಅನಿವಾರ್ಯ ಆಗಿದ್ದು, ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು ಎಂದು ಬಸವರಾಜ್ ನಾಯಕ್ ತಿಳಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಾಲತಿ ನಾಯಕ ಮಾತನಾಡಿ, ವಾಲ್ಮೀಕಿ ಸಮಾಜಕ್ಕೆ ಸಂವಿಧಾನ ಬದ್ಧ ಶೇ.7.5 ಮೀಸಲಾತಿ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಮೂರನೇ ದೊಡ್ಡ ಸಮುದಾಯವಾಗಿದ್ರೂ ಈ ಸಮುದಾಯಕ್ಕೆ ಸಾಂವಿಧಾನಿಕ‌ ಮಾನ್ಯತೆ ಸಿಕ್ಕಿಲ್ಲ. ಬೀದಿಗೆ ಇಳಿದು ಹೋರಾಟ ಮಾಡಿದ್ದರೂ ಈ ಸಮುದಾಯದ ಕೂಗು ಕೇಳಿಸದಿರುವ ಹಿನ್ನೆಲೆಯಲ್ಲಿ 10 ದಿನಗಳ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.