ETV Bharat / state

ಪುನೀತ್​ ನಾಮಫಲಕ, ಕನ್ನಡಬಾವುಟ ಕೆರೆಗೆ ಬಿಸಾಡಿದ ಕಿಡಿಗೇಡಿಗಳು : ಗ್ರಾಮಸ್ಥರಿಂದ ಪ್ರತಿಭಟನೆ - ಕೊಪ್ಪಳದಲ್ಲಿ ಪುನೀತ್​ ನಾಮಫಲಕ, ಕನ್ನಡಬಾವುಟ ಕಿತ್ತು ಬಿಸಾಕಿದ ಕಿಡಿಗೇಡಿಗಳು

ಕೊಪ್ಪಳ ತಾಲೂಕಿನ ಹೂವಿನಾಳ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಹೆಸರಲ್ಲಿ ಅಳವಡಿಸಲಾಗಿದ್ದ ನಾಮಫಲಕ ಹಾಗೂ ಕನ್ನಡ ಬಾವುಟವನ್ನು ಕಿಡಿಗೇಡಿಗಳು ಕಿತ್ತು ಹಾಕಿದ್ದಾರೆ..

Villagers protest in Koppal
ಕೊಪ್ಪಳದಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ
author img

By

Published : Mar 19, 2022, 2:11 PM IST

ಕೊಪ್ಪಳ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಲ್ಲಿ ಅಳವಡಿಸಲಾಗಿದ್ದ ನಾಮಫಲಕ ಹಾಗೂ ಕನ್ನಡ ಬಾವುಟವನ್ನು ಕಿಡಿಗೇಡಿಗಳು ಕಿತ್ತು ಹಾಕಿರುವ ಘಟನೆ ನಡೆದಿದೆ.

ತಾಲೂಕಿನ ಹೂವಿನಾಳ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ನಾಮಫಲಕ ತೆಗೆದುಕೊಂಡು ಹೋಗಿ ಕೆರೆಯಲ್ಲಿ ಬಿಸಾಕಿದ್ದಾರೆ. ಕಿಡಿಗೇಡಿಗಳು ನಾಮಫಲಕ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಹಿನ್ನೆಲೆಯಲ್ಲಿ ಹೂವಿನಾಳ ಗ್ರಾಮದಲ್ಲಿ ಅಭಿಮಾನಿಗಳು ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದು, ಸ್ಥಳೀಯ ಗ್ರಾಮ ಪಂಚಾಯತ್​​​ ಸದಸ್ಯ ಪತ್ರೆಪ್ಪ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ತುಮಕೂರು ಅಪಘಾತದ ಎಲ್ಲಾ ವಿವರ ಪಡೆದು ಕ್ರಮ ಕೈಗೊಳ್ಳುತ್ತೇನೆ : ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.