ETV Bharat / state

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಕೆಆರ್​ಪಿಪಿ ಸಂಸ್ಥಾಪಕ ಸೇರಿ ಐದು ಜನರ ಮೇಲೆ ಪ್ರಕರಣ ದಾಖಲು - kanakagiri

ಆಂಬ್ಯುಲೆನ್ಸ್ ಮೇಲೆ ಪಕ್ಷದ ನಿಯೋಜಿತ ಅಭ್ಯರ್ಥಿಗಳ ಪೋಟೋ, ನೀತಿ ಸಂಹಿತೆ ಜಾರಿಯಾದರೂ ಅನುಮತಿ ಪಡೆಯದೇ ಕ್ಷೇತ್ರದ ವಿವಿಧೆಡೆ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಜನಾರ್ದನ ರೆಡ್ಡಿ ಸೇರಿ ಐವರ ಮೇಲೆ ಪ್ರಕರಣ ದಾಖಲಾಗಿದೆ.

violation-of-code-of-conduct-case-registered-against-galijanardhana-reddy
ನೀತಿ ಸಂಹಿತೆ ಉಲ್ಲಂಘನೆ: ಕೆಆರ್​ಪಿಪಿ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಸೇರಿ ಐದು ಜನರಮೇಲೆ ಪ್ರಕರಣ ದಾಖಲು
author img

By

Published : Apr 3, 2023, 3:30 PM IST

Updated : Apr 3, 2023, 3:56 PM IST

ಕೊಪ್ಪಳ: ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಐದು ಜನರ ವಿರುದ್ಧ ಕನಕಗಿರಿ ಪೊಲೀಸ್​ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಕನಕಗಿರಿ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಡಾ.ಚಾರುಲ್ ವೆಂಕಟರಮಣ ದಾಸರಿ ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರಿಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದರು. ಕನಕಗಿರಿಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಎರಡು ದಿನಗಳ ಹಿಂದೆ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾಹನದ ಮೇಲೆ ಕೆಆರ್​​ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಲಕ್ಷ್ಮಿ ಅರುಣಾ, ಕನಕಗಿರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಚಾರುಲ್ ವೆಂಕಟರಮಣ ದಾಸರಿ ಭಾವ ಚಿತ್ರವಿದ್ದು ಚುನಾವಣಾ ನೀತಿ ಸಂಹಿತೆ ಜಾರಿಯಾದರೂ ಅನುಮತಿ ಪಡೆಯದೇ ಕ್ಷೇತ್ರದ ವಿವಿಧೆಡೆ ಪ್ರಚಾರ ಮಾಡುತ್ತಿದ್ದಾರೆ ಎಂದು ಈ ಮೂವರು ಸೇರಿದಂತೆ ವಾಹನ ಮಾಲೀಕ ಜಿ.ನವೀನ್ ಕುಮಾರ್, ವಾಹನ ಚಾಲಕ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಕನಕಗಿರಿ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ಫುಲ್ ಅಲರ್ಟ್: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಅಕ್ರಮಗಳ ಮೇಲೆ ಅಧಿಕಾರಿಗಳ ಹದ್ದಿನ ಕಣ್ಣು ಇಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚೆಕ್​ಪೋಸ್ಟ್​​ಗಳಲ್ಲಿ ಅಬಕಾರಿ ಅಧಿಕಾರಿಗಳು ಪುಲ್ ಅಲರ್ಟ್ ಆಗಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ ರಾಷ್ಟ್ರೀಯ ಹೆದ್ದಾರಿ 7ರ ಕನ್ನಮಂಗಲ ಟೋಲ್ ಬಳಿ ಅಬಕಾರಿ ಅಧಿಕಾರಿಗಳ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು - ಹೈದರಾಬಾದ್ ರಸ್ತೆಯ ಮೂಲಕ ಅಕ್ರಮ ಮದ್ಯ ಸಾಗಾಣಿಕೆ ಶಂಖೆ ಹಿನ್ನೆಲೆ ಅಬಕಾರಿ ಡಿಸಿ ನಾಗೇಶ್ ಹಾಗೂ ಇನ್ಸ್​​ಪೆಕ್ಟರ್​​ ಸುನೀಲ್ ನೇತೃತ್ವದಲ್ಲಿ ವಾಹನಗಳ ತಪಾಸಣೆ ತೀವ್ರಗೊಳಿಸಲಾಗಿದೆ. ಇನ್ನೂ ನೆಲಮಂಗಲ, ದೇವನಹಳ್ಳಿ, ಹೊಸಕೋಟೆಯಲ್ಲಿ ಇವರೆಗೆ ಲಕ್ಷಾಂತರ ಮೌಲ್ಯದ ಮದ್ಯ ಸೀಜ್ ಆಗಿದೆ. ಅಬಕಾರಿ ಇಲಾಖೆ 8 ತಂಡಗಳ ಕಾರ್ಯಾಚರಣೆಯಲ್ಲಿ 75 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಡಿದೆ.

ಬಿಎಲ್​ ಸಂತೋಷ್​​ ಭಾಷಣಕ್ಕೆ ಅಡ್ಡಿ: ಭಾನುವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅನುಮತಿ ಪಡೆದ ಅವಧಿ ಮುಗಿದಿದ್ದರಿಂದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭಾಷಣ ನಿಲ್ಲಿಸಿ ಕಾರ್ಯಕ್ರಮ ಮೊಟಕುಗೊಳಿಸಿದ ಘಟನೆ ಗಂಗಾವತಿ ತಾಲೂಕಿನ ಮರಳಿಯಲ್ಲಿ ನಡೆದಿದೆ. ತಾಲೂಕಿನ ಮರಳಿ ಗ್ರಾಮದ ಬಳಿ ಇರುವ ಖಾಸಗಿ ರೆಸಾರ್ಟ್​ನಲ್ಲಿ ಭಾನುವಾರ ಬಿಜೆಪಿಯ ಬಳ್ಳಾರಿ ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಬಳ್ಳಾರಿ ವಿಭಾಗ ವ್ಯಾಪ್ತಿಯ ವಿವಿಧ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು. ಸಭೆಯಲ್ಲಿ ನೆರೆದಿದ್ದ ಬಿಜೆಪಿಯ ಡಿಜಿಟಲ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿಎಲ್ ಸಂತೋಷ್, ಮುಂಬರುವ ಚುನಾವಣೆಯಲ್ಲಿ ಸೋಷಿಯಲ್ ಮೀಡಿಯಾದ ಜವಾಬ್ದಾರಿ ಮತ್ತು ಆದ್ಯತಾ ಕೆಲಸಗಳೇನು ಎಂಬುದರ ಬಗ್ಗೆ ಮಾತನಾಡುತ್ತಿದ್ದರು. ಆದರೆ, ಪಕ್ಷದಿಂದ ಪಡೆದುಕೊಂಡಿದ್ದ ಅನುಮತಿಯ ಅವಧಿ ಮುಗಿದ ಹಿನ್ನೆಲೆ ಸ್ಥಳದಲ್ಲಿದ್ದ ಅಧಿಕಾರಿಗಳು ತಕ್ಷಣ ವೇದಿಕೆಯತ್ತ ನುಗ್ಗಿ ಸಂತೋಷ್ ಅವರ ಭಾಷಣ ನಿಲ್ಲಿಸಲು ಹೇಳಿದರು.

ಇದನ್ನೂ ಓದಿ: ಬಿಜೆಪಿಗೆ ಚುನಾವಣಾ ಆಯೋಗದ ಶಾಕ್: ಸಿಎಂ ಇದ್ದಾಗಲೇ ದಾಳಿ ನಡೆಸಿ ಕೇಸರಿ ತೋರಣ ತೆರವು

Last Updated : Apr 3, 2023, 3:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.