ETV Bharat / state

ಲಾಕ್‌ಡೌನ್ ನಿಯಮ ಉಲ್ಲಂಘನೆ: ಕೊಪ್ಪಳದಲ್ಲಿ 100 ವಾಹನಗಳು ಜಪ್ತಿ - vehicles seized

ಜಿಲ್ಲೆಯಲ್ಲಿ ಲಾಕ್​​ಡೌನ್​ ನಿಯಮಗಳನ್ನು ಉಲ್ಲಂಘಿಸಿ ರಸ್ತೆಗಿಳಿದ 100 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ತಿಳಿಸಿದ್ದಾರೆ.

Koppal
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್
author img

By

Published : May 13, 2021, 6:50 AM IST

ಕೊಪ್ಪಳ: ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಳಿದ ಹಲವು ಬೈಕ್​​ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೆಲವು ಪ್ರಕರಣಗಳಿಗೆ ದಂಡ ವಿಧಿಸಲಾಗಿದೆ.

100 ವಾಹನಗಳನ್ನು ಜಪ್ತಿ ಮಾಡಿದ್ದು, ಮೋಟಾರು ವಾಹನ ಕಾಯ್ದೆಯಡಿ 211 ಪ್ರಕರಣಗಳಲ್ಲಿ 67,300 ರೂ. ದಂಡ ವಿಧಿಸಲಾಗಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 308 ಪ್ರಕರಣಗಳಿಂದ 30,800 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.

ಜಿಲ್ಲೆಯ ವಿವಿಧೆಡೆಯಲ್ಲಿ 9 ಚೆಕ್​​ಪೋಸ್ಟ್, ಅಂತರ್ ಜಿಲ್ಲಾ ಗಡಿಗಳಲ್ಲಿ 12 ಚೆಕ್​​ಪೋಸ್ಟ್ ಪ್ರಾರಂಭಿಸಲಾಗಿದೆ. ಬೇರೆ ಬೇರೆ ಪ್ರದೇಶಗಳಿಂದ ಬರುವ ಸಾರ್ವಜನಿಕರನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.