ಕೊಪ್ಪಳ: ಜಿಲ್ಲೆಯ ಮುನಿರಾಬಾದ್, ಕುಕನೂರು ಹಾಗೂ ಕುಷ್ಟಗಿಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದ ದಕ್ಷ ಪೊಲೀಸ್ ಅಧಿಕಾರಿ ವಿಶ್ವನಾಥ್ ಹಿರೇಗೌಡರ್ ಇದೀಗ ಮತ್ತೆ ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ವೇಳೆ ಅಕ್ರಮ ಮದ್ಯ ಮಾರಾಟ, ಮದ್ಯಪಾನ ಜಾಗೃತಿ ಕುರಿತು ಜನಪರ ಕಾಳಜಿಯ ಕೆಲಸ ಮಾಡಿದ್ದರು. ಈ ಮೂಲಕ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದರು.
ಈಗ ವಿಶ್ವನಾಥ ಹಿರೇಗೌಡರ್ ಅವರು ಸಿಪಿಐ ಅಗಿ ಕೊಪ್ಪಳಕ್ಕೆ ಬಂದು ಅಧಿಕಾರ ವಹಿಸಿಕೊಂಡಿರೋದು ಜನರಲ್ಲಿ ಅನೇಕ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಅಲ್ಲದೆ ಜನರು ಬಂದು ಅವರನ್ನು ಭೇಟಿ ಮಾಡಿ ಅಭಿನಂದಿಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿನ ಜೂಜಾಟ, ಮಟ್ಕಾ, ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂಬ ನಿರೀಕ್ಷೆ ಜನರದ್ದಾಗಿದೆ.