ETV Bharat / state

ಬೇಸಿಗೆಯ ಮುನ್ನವೇ ಬಾಯಾರಿದ ಕೊಪ್ಪಳ!

ಮುಂಬರುವ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯ ಸುಮಾರು 321 ಜನವಸತಿ ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಲಿವೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಅಂದಾಜಿಸಿ ವರದಿ ಸಿದ್ಧಪಡಿಸಿದೆ.

ಕೊಪ್ಪಳ
author img

By

Published : Feb 12, 2019, 5:36 PM IST

ಕೊಪ್ಪಳ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೂ ಸಹ ಜಿಲ್ಲೆಯ ಹಲವೆಡೆ ಕುಡಿಯುವ ನೀರಿಗಾಗಿ ಈಗಾಗಲೇ ತತ್ವಾರ ಶುರುವಾಗಿದ್ದು, ಬೇಸಿಗೆ ಸಂದರ್ಭದಲ್ಲಿ ಈ ಸಮಸ್ಯೆ ಉಲ್ಬಣವಾಗಲಿದೆ ಎಂಬ ವರದಿ ಹೊರಬಿದ್ದಿದೆ.

ಹೌದು, ಮುಂಬರುವ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯ ಸುಮಾರು 321 ಜನವಸತಿ ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಲಿವೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಅಂದಾಜಿಸಿ ಈ ವರದಿಯನ್ನು ಸಿದ್ಧಪಡಿಸಿದೆ.

ಮಳೆ ಇಲ್ಲದೆ ಪದೇ ಪದೆ ಬರಗಾಲಕ್ಕೆ ತುತ್ತಾಗುವ ಕೊಪ್ಪಳ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಬೇಸಿಗೆ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗುತ್ತದೆ. ಮಳೆ ಬಿದ್ದರೆ ಅಂತಹ ಸಮಸ್ಯೆ ಉದ್ಭವವಾಗುವುದಿಲ್ಲ. ಆದರೆ ಈ ಬಾರಿ ಹಿಂಗಾರು ಮತ್ತು ಮುಂಗಾರು ವಿಫಲವಾಗಿರುವುದರಿಂದ ಕುಡಿಯುವ ನೀರಿನ ತತ್ವಾರ ಶುರುವಾಗುವುದರಲ್ಲಿ ಅನುಮಾನವೇ ಇಲ್ಲ. ಜಿಲ್ಲೆಯಲ್ಲಿ ಅಂತರ್ಜಲ ಪಾತಾಳಕ್ಕೆ ಇಳಿದಿದೆ. ಕೆರೆ ಕಟ್ಟೆಗಳು ನೀರಿಲ್ಲದೆ ಒಣಗಲು ಆರಂಭಿಸಿವೆ. ಹೀಗಾಗಿ ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸಾಧ್ಯತೆ ಇದೆ.

ಕೊಪ್ಪಳ
undefined

ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗುವ ಆತಂಕ ವ್ಯಕ್ತಪಡಿಸಿರುವ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ ವರದಿಯನ್ನು ಸಿದ್ಧಪಡಿಸಿದೆ. ಆ ವರದಿಯ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 737 ಜನವಸತಿ ಪ್ರದೇಶಗಳಿದ್ದು, ಈ ಪೈಕಿ ಸದ್ಯ ಎರಡು 279 ವಸತಿ ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ. ಬೇಸಿಗೆ ಸಂದರ್ಭದಲ್ಲಿ ಇದರ ಪ್ರಮಾಣ 321 ಆಗಲಿದೆ ಎಂದು ಅಂದಾಜಿಸಲಾಗಿದೆ. ಗಂಗಾವತಿ ತಾಲೂಕಿನಲ್ಲಿ 68 ಜನವಸತಿ ಪ್ರದೇಶ, ಕೊಪ್ಪಳ ತಾಲೂಕಿನಲ್ಲಿ 83, ಕುಷ್ಟಗಿ ತಾಲೂಕಿನಲ್ಲಿ 98 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 72 ಗ್ರಾಮಗಳು ಸೇರಿದಂತೆ ಒಟ್ಟು 321 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಲಿವೆ ಎಂದು ಅಂದಾಜಿಸಲಾಗಿದೆ.

Intro:

Body:ಕೊಪ್ಪಳ:- ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೂ ಸಹ ಜಿಲ್ಲೆಯ ಹಲವೆಡೆ ಕುಡಿಯುವ ನೀರಿಗಾಗಿ ಈಗಾಗಲೇ ತತ್ವಾರ ಶುರುವಾಗಿದೆ. ಇನ್ನು ಬೇಸಿಗೆ ಸಂದರ್ಭದಲ್ಲಿ ಈ ಸಮಸ್ಯೆ ಉಲ್ಬಣವಾಗಲಿದೆ. ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯ ಸುಮಾರು 321 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಯ ಸುಳಿಯಲ್ಲಿ ಸಿಲುಕಲಿವೆ. ಹೀಗಂತ ನಾವು ಹೇಳ್ತಿಲ್ಲ. ಗ್ರಾಮೀಣ ‌ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಿದ್ದಪಡಿಸಿರುವ ವರದಿ ಹೇಳುತ್ತಿದೆ.
ಹೌದು...., ಮುಂಬರುವ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯ ಸುಮಾರು 321 ಜನವಸತಿ ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಲಿವೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಅಂದಾಜಿಸಿ ಈ ವರದಿಯನ್ನು ಸಿದ್ಧಪಡಿಸಿದೆ. ಮಳೆ ಇಲ್ಲದೆ ಪದೇ ಪದೇ ಬರಗಾಲಕ್ಕೆ ತುತ್ತಾಗುವ ಕೊಪ್ಪಳ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಬೇಸಿಗೆ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗುತ್ತದೆ. ಮಳೆ ಬಿದ್ದರೆ ಅಂತಹ ಸಮಸ್ಯೆ ಉದ್ಭವವಾಗುವುದಿಲ್ಲ. ಆದರೆ ಈ ಬಾರಿಯೂ ಹಿಂಗಾರು ಮತ್ತು ಮುಂಗಾರು ವಿಫಲವಾಗಿರುವುದರಿಂದ ಕುಡಿಯುವ ನೀರಿನ ತತ್ವಾರ ಶುರುವಾಗುವುದರಲ್ಲಿ ಅನುಮಾನವೇ ಇಲ್ಲ. ಜಿಲ್ಲೆಯಲ್ಲಿ ಅಂತರ್ಜಲ ಪಾತಾಳಕ್ಕೆ ಇಳಿದಿದೆ. ಕೆರೆ ಕಟ್ಟೆಗಳು ನೀರಿಲ್ಲದೆ ಒಣಗಲು ಆರಂಭಿಸಿವೆ. ಹೀಗಾಗಿ ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಏರುವ ಸಾಧ್ಯತೆ ಇದೆ. ಈಗಾಗಲೇ ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಈಗಲೇ ಈ ಪರಿಸ್ಥಿತಿ ಇರುವಾಗ ಬೇಸಿಗೆ ಸಂದರ್ಭದಲ್ಲಿ ಹೇಗಿರಬೇಕು ಎಂದು ಆ ಪರಸ್ಥಿತಿ ಊಹೆ ಮಾಡಿಕೊಂಡರೆ‌ ನಿಜಕ್ಕೂ ಭಯವಾಗುತ್ತದೆ. ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗುವ ಆತಂಕ ವ್ಯಕ್ತಪಡಿಸಿರುವ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ ವರದಿಯನ್ನು ಸಿದ್ಧಪಡಿಸಿದೆ. ಆ ವರದಿಯ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 737 ಜನವಸತಿ ಪ್ರದೇಶಗಳಿದ್ದು ಈ ಪೈಕಿ ಸದ್ಯ ಎರಡು 279 ವಸತಿ ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ. ಬೇಸಿಗೆ ಸಂದರ್ಭದಲ್ಲಿ ಇದರ ಪ್ರಮಾಣ 321 ಆಗಲಿದೆ ಎಂದು ಅಂದಾಜಿಸಲಾಗಿದೆ. ಗಂಗಾವತಿ ತಾಲೂಕಿನಲ್ಲಿ 68 ಜನವಸತಿ ಪ್ರದೇಶ, ಕೊಪ್ಪಳ ತಾಲೂಕಿನಲ್ಲಿ 83, ಕುಷ್ಟಗಿ ತಾಲೂಕಿನಲ್ಲಿ 98 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 72 ಗ್ರಾಮಗಳು ಸೇರಿದಂತೆ ಒಟ್ಟು 321 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಲಿವೆ ಎಂದು ಅಂದಾಜಿಸಲಾಗಿದೆ. ಇನ್ನು ಜಿಲ್ಲಾ ಕೇಂದ್ರ ಕೊಪ್ಪಳ ನಗರದಿಂದ ಕೂಗಳತೆ ದೂರದಲ್ಲಿರುವ ಬಹದ್ದೂರಬಂಡಿ ಗ್ರಾಮ ಸೇರಿದಂತೆ ಅನೇಕ ಗ್ರಾಮಗಳು ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು ಕುಡಿಯುವ ನೀರಿಗಾಗಿ ಇಲ್ಲಿನ ಜನ ಪರಿತಪಿಸುತ್ತಿದ್ದಾರೆ. ಈಗಲೇ ನೀರಿನ ಸಮಸ್ಯೆ ತಾರಕಕ್ಕೇರಿದೆ. ಮುಂದಿನ ದಿನಗಳಲ್ಲಿ ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡುತ್ತಾರೆ ಬಹದ್ದೂರಬಂಡಿಯ ಅಂಜನಮ್ಮ. ಒಟ್ಟಾರೆಯಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಅಂದಾಜಿಸಿದಂತೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ ಗ್ರಾಮಗಳಿಗೆ ಸಮಸ್ಯೆ ಎದುರಾಗದಂತೆ ಈಗಲೇ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು. ಇಲ್ಲವಾದಲ್ಲಿ ಜೀವಜಲಕ್ಕಾಗಿ ಜನರು ನಿತ್ಯ ಜಗಳ ಮಾಡಿಕೊಂಡರೂ ಅಚ್ಚರಿಪಡಬೇಕಿಲ್ಲ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.