ಕೊಪ್ಪಳ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ವಿದೇಶದಿಂದ ಬಂದ 12 ಜನರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಹೇಳಿದರು.
ಜಿಲ್ಲೆಗೆ ಇಟಲಿ, ಇರಾಕ್, ಸೌದಿ ಅರೇಬಿಯಾದಿಂದ ಕೆಲವರು ಆಗಮಿಸಿದ್ದು, ಅವರ ಮೇಲೆ ನಿಗಾ ವಹಿಸಲಾಗಿದೆ. ಅಷ್ಟೇ ಅಲ್ಲದೆ ಮಾಧ್ಯಮ ಮತ್ತು ಜನರ ಮೂಲಕ ಮಾಹಿತಿ ಪಡೆದುಕೊಂಡು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 5 ಜನರು 14 ದಿನಗಳ ನಿಗಾವನ್ನು ಕಂಪ್ಲೀಟ್ ಮಾಡಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಇನ್ನುಳಿದವರ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ ಎಂದರು.
ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಕಡೆ ಕೆಲ ವಿದೇಶಿ ಪ್ರವಾಸಿಗರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 11 ಜನ ಇಂಗ್ಲೆಂಡ್ನಿಂದ ಬಂದಿದ್ದು, 8 ಜನ ವಾಪಸ್ ಹೋಗಿದ್ದಾರೆ. ಮೂರು ಜನರಿಗೆ ಬೇರೆ ಆರೋಗ್ಯ ಸಮಸ್ಯೆಯಿಂದಾಗಿ ಇಲ್ಲಿಯೇ ಉಳಿದುಕೊಂಡಿದ್ದಾರೆ. ಇನ್ನು ನಮ್ಮ ಜಿಲ್ಲೆಯಲ್ಲಿ ಸ್ಕ್ರೀನಿಂಗ್ ಮಾಡುವ ಅವಶ್ಯಕತೆ ಬಂದಿಲ್ಲ. ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಚೆಕ್ ಪೋಸ್ಟ್ ಅವಶ್ಯಕತೆ ಇಲ್ಲ. ಆದರೆ, ರಾಯಚೂರು ಜಿಲ್ಲೆಯ ಬಾರ್ಡರ್ನಲ್ಲಿ ಚೆಕ್ ಪೋಸ್ಟ್ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.