ETV Bharat / state

ಗಂಗಾವತಿಯಲ್ಲಿ ಕೊರೊನಾಗೆ ಮಹಿಳೆ ಬಲಿ: ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ - Prohibition by the villagers to the funeral

ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ  ಕೊರೊನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಮುಂದಾದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.

Prohibition by the villagers to the funeral
ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರಿಂದ ತಡೆ
author img

By

Published : Jun 18, 2020, 2:30 PM IST

ಗಂಗಾವತಿ: ತಾಲೂಕಿನ ಮರಳಿ ಗ್ರಾಮದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಮಹಿಳೆಯೊಬ್ಬರ ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಗ್ರಾಮದ 47 ವರ್ಷದ‌ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಬುಧವಾರ ಸಂಜೆ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೋವಿಡ್ ವಿಧಿ ವಿಧಾನಗಳಂತೆ ಮೃತರ ಅಂತ್ಯ ಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಮಹಿಳೆಯ ಅಂತ್ಯ ಸಂಸ್ಕಾರವನ್ನು ತಮ್ಮ ಗ್ರಾಮದ ಸ್ಮಶಾನದಲ್ಲಿ ಮಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ

ಸಾರ್ವಜನಿಕರಿಂದ ವಿರೋಧ ಏಕೆ?: ಸೋಂಕಿತೆಯ ಶವ ಸಂಸ್ಕಾರದಿಂದ ಗ್ರಾಮದಲ್ಲಿ ಬೇರೆಯವರಿಗೆ ವೈರಸ್​ ಹರಡಬಹುದು ಎಂದು ಭಾವಿಸಿದ ಸಾರ್ವಜನಿಕರು, ಮುಂದೆ ಇದರಿಂದ ಗ್ರಾಮಸ್ಥರಿಗೆ ಏನಾದರೂ ಸಮಸ್ಯೆಯಾದರೆ ಅದಕ್ಕೆ ಜವಾಬ್ದಾರಿ ಯಾರು ಎಂದು ಪ್ರಶ್ನಿಸಿ ವಿರೋಧ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಶವ ಸಂಸ್ಕಾರಕ್ಕೆ ಗುಂಡಿ ತೋಡಲು ಆಗಮಿಸಿದ ಜೆಸಿಬಿ ವಾಹನವನ್ನು ತಡೆದು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಸ್ಥಳಕ್ಕಾಗಮಿಸಿದ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಹಾಗೂ ತಹಶೀಲ್ದಾರ್​​ ಪರಿಸ್ಥಿತಿ ತಿಳಿಗೊಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.