ETV Bharat / state

ಕುಷ್ಟಗಿ: ಪ್ರಿಯತಮನಿಗಾಗಿ ಮೂವರು ಮಕ್ಕಳನ್ನು ಬಿಟ್ಟು ಬಂದು ಹೆಣವಾದ್ಲು ಮಹಿಳೆ! - Koppal police

ನಿನ್ನೆ ಕುಷ್ಟಗಿ ತಾಲೂಕಿನ ನಿಲೋಗಲ್ ಬಳಿಯ ನಿರ್ಜನ ಪ್ರದೇಶದಲ್ಲಿ ‌ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಸಾವಿನ ಹಿನ್ನೆಲೆಯನ್ನು ಪೊಲೀಸರು ತನಿಖೆ ಮೂಲಕ ಬಯಲಿಗೆಳೆಯುತ್ತಿದ್ದಾರೆ. ಈ ಸಂಬಂಧ ಓರ್ವನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ddsd
ಕೊಪ್ಪಳದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
author img

By

Published : Nov 23, 2020, 8:51 AM IST

ಕುಷ್ಟಗಿ (ಕೊಪ್ಪಳ): ತಾಲೂಕಿನ ನಿಲೋಗಲ್ ಗ್ರಾಮದಿಂದ ಗುಡೂರು ರಸ್ತೆಯ ನಿರ್ಜನ ಪ್ರದೇಶದಲ್ಲಿ ನಿನ್ನೆ ‌ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ಮೇಲ್ನೋಟಕ್ಕೆ ಕೊಲೆ ಎಂದು ಶಂಕಿಸಲಾಗಿದ್ದು, ಈ ಕೊಲೆಗೆ ಅನೈತಿಕ ಸಂಬಂಧ ಕಾರಣ ಎನ್ನಲಾಗ್ತಿದೆ. ಮಹಿಳೆ ಧಾರವಾಡ ಜಿಲ್ಲೆ ಕಲಘಟಗಿ ಮೂಲದವಳಾಗಿದ್ದಾಳೆ. ಗೋವಾಕ್ಕೆ ದುಡಿಯಲು ಹೋಗಿದ್ದ ಸಂದರ್ಭದಲ್ಲಿ ಕುಷ್ಟಗಿ ತಾಲೂಕಿನ ಮಿಟ್ಲಕೋಡ್ ಗ್ರಾಮದ ಯುವಕನೊಂದಿಗೆ ವಿವಾಹೇತರ ಸಂಬಂಧವಿತ್ತು ಎನ್ನಲಾಗ್ತಿದೆ. ಈ ಹಿನ್ನೆಲೆ ಮಹಿಳೆ ತನ್ನ ಮೂವರು ಮಕ್ಕಳನ್ನು ತೊರೆದು ನ.18ರಂದು ಇಲ್ಲಿಗೆ ಬಂದಿದ್ದಳು ಎನ್ನಲಾಗ್ತಿದೆ.

ಇದನ್ನು ಓದಿ: ಕೊಪ್ಪಳ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ನಿನ್ನೆ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಕಂಡ ಕುರಿಗಾಹಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಎಸ್​ಪಿ ಟಿ.ಶ್ರೀಧರ್​ ಸೇರಿ ಹಿರಿಯ ಪೊಲೀಸ್​ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಗೋವಾ ನಿವಾಸಿಯಾಗಿರುವ ಮೃತ ಮಹಿಳೆಯ ಪ್ರಿಯತಮ ನಿಂಗಪ್ಪ ನಾಗಪ್ಪ ಭೀಮನಗಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.