ಕೊಪ್ಪಳ: ತಾಲೂಕಿನ ಗುಳದಳ್ಳಿ ಗ್ರಾಮದ ಬಾಣಂತಿಯೊಬ್ಬರು ಮಹಾಮಾರಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಗುಳದಳ್ಳಿ ಗ್ರಾಮದ 22 ವರ್ಷದ ನಿರ್ಮಲಾ ಎಂಬುವವರು 24 ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಆಕೆಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ ತೀವ್ರ ಉಸಿರಾಟ ಸಮಸ್ಯೆ ಉಂಟಾಗಿ ಕೊನೆಯುಸಿರೆಳೆದಿದ್ದಾರೆ.
ಓದಿ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆಯನ್ನು ಮದುವೆಯಾದ 47 ವರ್ಷದ ವ್ಯಕ್ತಿ!