ಕುಷ್ಟಗಿ : ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ಮೂಲಕ ದೇಶದ ಪ್ರಗತಿಗೆ ಸಹಕರಿಸಬೇಕೆಂದು ತಹಶೀಲ್ದಾರ್ ಎಂ ಸಿದ್ದೇಶ್ ಕರೆ ನೀಡಿದರು.
ತಹಶೀಲ್ದಾರರ ಕಚೇರಿಯ ಆವರಣದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಪ್ರಯುಕ್ತ ಆಟೋ ಮೂಲಕ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಸರ್ಕಾರದಿಂದ ಬಾಲ ಕಾರ್ಮಿಕರಿಗೆ ಸಿಗುವ ಶಿಕ್ಷಣ ಸೌಲಭ್ಯಗಳನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ಸತೀಶ್, ಕಂದಾಯ ನಿರೀಕ್ಷಕ ಶರಣಯ್ಯ ನಿಡಗುಂದಿಮಠ, ಗುರುರಾಜ ಕೊಳ್ಳಿ ಭಾಗವಹಿಸಿದ್ದರು. ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜಾಗೃತಿಯ ಕರಪತ್ರ ಬಿಡುಗಡೆಗೊಳಿಸಲಾಯಿತು.