ETV Bharat / state

ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ದೂರು ದಾಖಲು

author img

By ETV Bharat Karnataka Team

Published : Dec 1, 2023, 6:06 PM IST

Updated : Dec 1, 2023, 7:53 PM IST

Attack on old man : ಯುವಕರ ಗುಂಪೊಂದು ವೃದ್ಧನಿಗೆ ಥಳಿಸಿದ ಘಟನೆ ಗಂಗಾವತಿಯಲ್ಲಿ ಬೆಳಕಿಗೆ ಬಂದಿದೆ.

youths-allegedly-assaults-on-old-man-in-gangavati
ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ: ದೂರು ದಾಖಲು

ಗಂಗಾವತಿ: ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಯುವಕರ ಗುಂಪೊಂದು ಮುಸ್ಲಿಂ ಅಂಧ ವೃದ್ಧನಿಗೆ ಥಳಿಸಿದ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗಂಗಾವತಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ಯುವಕರ ಗುಂಪೊಂದು ತನ್ನ ಮೇಲೆ ಹಲ್ಲೆ ಮಾಡಿದೆ ಎಂದು ನೊಂದ ವೃದ್ಧ ನವೆಂಬರ್​ 25ರಂದು ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೃದ್ಧ ಭಿಕ್ಷಾಟನೆ ಮಾಡುತ್ತ ಜೀವನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಮಹೆಬೂಬನಗರದ ನಿವಾಸಿ ಹುಸೇನಸಾಬ್​ (70) ಎಂಬುವರ ಮೇಲೆ ನವೆಂಬರ್​ 20ರಂದು ಹಲ್ಲೆ ನಡೆದಿದೆ. ಗಂಗಾವತಿಯ ಜಯನಗರದ ಬೈಪಾಸ್ ರಸ್ತೆಯಲ್ಲಿ ನಡೆದು ಹೋಗುತ್ತಿರುವಾಗ ಯುವಕರ ಗುಂಪೊಂದು ತಮ್ಮನ್ನು ಅಡ್ಡಗಟ್ಟಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದೆ. ಬಳಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದ್ದಾರೆ. ಜೊತೆಗೆ ಗಡ್ಡಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದು, ಬಳಿಕ ತಮ್ಮ ಬಳಿಯಿದ್ದ ಹಣವನ್ನೂ ದೋಚಿಕೊಂಡು ಹೋಗಿದ್ದಾರೆ. ಸಮಯಕ್ಕೆ ಸರಿಯಾಗಿ ಸಮೀಪದಲ್ಲಿದ್ದ ಕುರಿಗಾಹಿ ಯುವಕರು ಸ್ಥಳಕ್ಕೆ ಆಗಮಿಸಿ ತಮ್ಮನ್ನು ರಕ್ಷಣೆ ಮಾಡಿದ್ದಾರೆ ಎಂದು ವೃದ್ಧ ದೂರಿನಲ್ಲಿ ತಿಳಿಸಿದ್ದಾರೆ.

ಜೊತೆಗೆ ವೃದ್ಧನಿಗೆ ಕೀಟಲೆ ಮಾಡಿದ ಅಪರಿಚಿತ ಯುವಕರು ಗುಂಪು ಬೆದರಿಕೆ ಹಾಕಿದ್ದರು. ಹೀಗಾಗಿ ಅವರು ಘಟನೆಯ ಬಗ್ಗೆ ಯಾರಿಗೂ ಹೇಳಿರಲಿಲ್ಲ ಎನ್ನಲಾಗಿದೆ. ಬಳಿಕ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಕೆಲವರು ಗಂಗಾವತಿಯ ಕೆಲ ಯುವಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಯುವಕರು ವೃದ್ಧನನ್ನು ಹುಡುಕಿ ಘಟನೆಯ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಅಲ್ಲದೇ ಮಾನಸಿಕವಾಗಿ ಕುಗ್ಗಿದ್ದ ವೃದ್ಧನಿಗೆ ಸಮಾಧಾನ ಹೇಳಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಂಧನಕ್ಕೆ ಒತ್ತಾಯ: ಘಟನೆ ನಡೆದು ಹತ್ತು ದಿನ ಕಳೆದಿದೆ. ಪ್ರಕರಣ ದಾಖಲಾಗಿ ಒಂದು ವಾರ ಕಳೆದಿದೆ. ಆದರೆ ಇದುವರೆಗೂ ಪೊಲೀಸರು ಆರೋಪಿಗಳ ಪತ್ತೆ ಮಾಡಿಲ್ಲ. ಕೂಡಲೇ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಸ್ಟೂಡೆಂಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸಲೀಂ ಮನಿಯಾರ ಒತ್ತಾಯಿಸಿದ್ದಾರೆ. ಗಂಗಾವತಿಯಲ್ಲಿ ಎಲ್ಲರೂ ಸಹ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇಂತಹ ಘಟನೆಗಳಿಂದ ಸಮಾಜದ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಕೂಡಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಸಲೀಂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮದ್ದೂರು: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಹತ್ಯೆ.. ದೂರು ದಾಖಲು

Last Updated : Dec 1, 2023, 7:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.