ಕೊಪ್ಪಳ: ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ವಿರುದ್ಧ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿ, ಪ್ರವಾಸಿ ಮಂದಿರದಿಂದ ಹೊರ ನಡೆದ ಘಟನೆ ಇಂದು ನಗರದಲ್ಲಿ ನಡೆಯಿತು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಕಾಮಗಾರಿ ಪರಿಶೀಲನೆಗೆ ಸಚಿವ ಕೃಷ್ಣಬೈರೇಗೌಡ ಅವರು ಕೊಪ್ಪಳಕ್ಕೆ ಆಗಮಿಸಿದ್ದರು. ಅವರನ್ನು ಕಾಣಲು ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ ನಗರದ ಪ್ರವಾಸಿ ಮಂದಿರಕ್ಕೆ ಬಂದಿದ್ದರು.
ಆದರೆ, ಸಚಿವರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆ ಸಚಿವರ ವಿರುದ್ಧ ಅಸಮಾಧಾನಗೊಂಡು ಪ್ರವಾಸಿ ಮಂದಿರದಿಂದ ಹೊರ ನಡೆದರು.