ಮಂಡ್ಯ: ಸಕ್ಕರೆನಾಡಿನಲ್ಲಿ ಮಾಹಾಮಾರಿಯ ಪ್ರಭಾವ ಹೆಚ್ಚಾಗಿದ್ದು, ಜಿಲ್ಲೆಯಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಎರಡು ಪ್ರಕರಣ ದೆಹಲಿ ಸಂಪರ್ಕ ಹೊಂದಿದ್ದು, ಕೆಲವು ಅಂತರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದ ವ್ಯಕ್ತಿಗಳಲ್ಲಿ ಹಾಗೂ ಬೆಂಗಳೂರಿನ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 400 ಪ್ರಕರಣ ಇಲ್ಲಿವರೆಗೂ ಪತ್ತೆಯಾಗಿವೆ. ಇಂದು ನಾಲ್ಕು ಮಂದಿ ಗುಣಮುಖರಾಗಿದ್ದು, ಒಟ್ಟು 338 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು 62 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.