ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಎಂ. ಶೆಟ್ಟಿಹಳ್ಳಿ ಗ್ರಾಮದಲ್ಲಿ ಕೊರೊನಾ ಸೋಂಕನ್ನು ನಿರ್ಲಕ್ಷ್ಯ ಮಾಡಿದ್ದರಿಂದ, ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಗ್ರಾಮಕ್ಕೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಹಬ್ಬಕ್ಕೆ ನಿರ್ಬಂಧ ಹೇರಲಾಗಿದ್ದು, ನೆಂಟರಿಷ್ಟರನ್ನು ಕರೆಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದ್ದಾರೆ.
ಇಂದು ಒಂದೇ ದಿನ 12 ಸೋಂಕಿತರು ಗ್ರಾಮದಲ್ಲಿ ಪತ್ತೆ ಹಿನ್ನೆಲೆಯಲ್ಲಿ ಗ್ರಾಮವನ್ನು ಕಂಟೇನ್ಮೆಂಟ್ ವಲಯವಾಗಿ ಘೋಷಿಸಿ, ರ್ಯಾಂಡಂ ಟೆಸ್ಟ್ಗೆ ಸೂಚನೆ ನೀಡಿದೆ. ಹೆಚ್ಚಿನ ಸೋಂಕಿತರ ಪತ್ತೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೊರೊನಾ ಸೋಂಕು ಹೆಚ್ಚಳದಿಂದ ಕಠಿಣ ಕ್ರಮಕ್ಕೆ ತಾಲೂಕು ಆಡಳಿತ ಮುಂದಾಗಿದೆ.
ಓದಿ : ಬ್ರೆಜಿಲ್ನಲ್ಲಿ ಒಂದೇ ದಿನಕ್ಕೆ 3000 ಜನ ಕೋವಿಡ್ಗೆ ಬಲಿ.. ಇದು ವಿಶ್ವಕ್ಕೆ ಎಚ್ಚರಿಕೆಯ ಗಂಟೆ!