ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡ ಹಾಗೂ ಸಂತೆಮರಳ್ಳಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಮೂರ್ತಿ, ಸೀಗೆ ಹುಣ್ಣಿಮೆ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿಯ ಭೂ ವರಹನಾಥ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರಿನ ಪರಕಾಲ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಇಂದು ವರಹನಾಥ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಇಬ್ಬರು ರಾಜಕೀಯ ಮುಖಂಡರು ಅಭಿಷೇಕದಲ್ಲಿ ಪಾಲ್ಗೊಂಡು ದೇವರಲ್ಲಿ ಪಾರ್ಥನೆ ಸಲ್ಲಿಸಿದ್ದಾರೆ. ಈ ವಿಶೇಷ ಪೂಜೆಯು ಇಬ್ಬರು ಮುಖಂಡರ ರಾಜಕೀಯ ಭವಿಷ್ಯಕ್ಕಾಗಿ ನಡೆದಿದೆ ಎಂಬ ಕೂಗು ಕೇಳಿ ಬಂದಿದೆ.
ಸಾವಿರ ಲೀಟರ್ ಹಾಲು, 500 ಲೀಟರ್ ಎಳನೀರು, ಕಬ್ಬಿನ ಹಾಲು, ಜೇನುತುಪ್ಪ ಸೇರಿದಂತೆ ವಿವಿಧ ಬಗೆಯ ಸುಮಾರು 58 ವಿಶೇಷ ಪುಷ್ಪಗಳಿಂದ ದೇವರಿಗೆ ಅಲಂಕಾರ ಮಾಡಿ ವಿಶೇಷ ಅಭಿಷೇಕ ಮಾಡಲಾಯಿತು.