ETV Bharat / state

ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್​​ ನೀರು ಬಿಡುಗಡೆ

ಕೆಆರ್​ಎಸ್ ಅಣೆಕಟ್ಟೆಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್​​ ನೀರು ಬಿಡುಗಡೆ ಮಾಡಲಾಗಿದೆ.

25 thousand cusec of water released from KRS reservoir to Kaveri river
ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್​​ ನೀರು ಬಿಡುಗಡೆ
author img

By

Published : Jul 10, 2022, 1:31 PM IST

Updated : Jul 10, 2022, 1:37 PM IST

ಮಂಡ್ಯ: ಕೆಆರ್​ಎಸ್ ಜಲಾಶಯದಿಂದ 15 ಗೇಟ್​ಗಳ ​ಮೂಲಕ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್​​ಗೂ ಹೆಚ್ಚಿನ ನೀರು ಹೊರ ಬಿಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಜಲಾಶಯಕ್ಕೆ 30 ಸಾವಿರ ಕ್ಯೂಸೆಕ್​​ಗೂ ಅಧಿಕ ನೀರು ಹರಿದುಬಂದಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಡ್ಯಾಂನಲ್ಲಿ 123 ಅಡಿ ನೀರು ಭರ್ತಿಯಾಗುತ್ತಿದ್ದಂತೆ ನೀರು ಹೊರಬಿಡಲಾಗಿದೆ. 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ನಿನ್ನೆ ಮಧ್ಯಾಹ್ನದಿಂದ 10 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿತ್ತು. 123 ಅಡಿ ಭರ್ತಿಯಾಗುತ್ತಿದ್ದಂತೆ ಹೊರಹರಿವಿನ ಪ್ರಮಾಣವನ್ನು ಅಧಿಕಾರಿಗಳು ಹೆಚ್ಚಿಸಿದರು. ಸದ್ಯ ಡ್ಯಾಂಗೆ 30,216 ಒಳ ಹರಿವು ಇದ್ದು, ಸಂಜೆ ವೇಳೆಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಒಳ ಹರಿವು ಹೆಚ್ಚಾದಂತೆ ಹೊರ ಹರಿವನ್ನು ಹೆಚ್ಚಿಸಲಾಗುತ್ತದೆ.

ಎಚ್ಚರಿಕೆ!: ಜಲಾಶಯದ ಕೆಳಭಾಗದ ನದಿತೀರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಈಗಾಗಲೇ ನದಿ ತೀರದ ಗ್ರಾಮಗಳ ಜನರು ಜಾನುವಾರುಗಳನ್ನು ತೆಗೆದುಕೊಂಡು ಹೋಗದಂತೆ ಆಯಾ ಗ್ರಾ.ಪಂ ಹಳ್ಳಿ ಜನರಿಗೆ ನೋಟಿಸ್ ಜಾರಿ ಮಾಡಿ ಎಚ್ಚರಿಸಲಾಗಿದೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರ ದೋಣಿವಿಹಾರವನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಜುಲೈ 12ರವರೆಗೆ 'ರೆಡ್ ಅಲರ್ಟ್'

ನದಿ ಬಳಿಯ ಪ್ರವಾಸಿ ತಾಣಗಳಲ್ಲಿ ಪೊಲೀಸರನ್ನು ನಿಯೋಜಿಸಿ ಪ್ರವಾಸಿಗರು, ಸ್ಥಳೀಯರು ನದಿಯ ಹತ್ತಿರ ಹೋಗದಂತೆ ತಡೆಯಲಾಗುತ್ತಿದೆ. ನದಿ ಬಳಿ ತೆರಳದಂತೆ ಗ್ರಾಮಗಳಲ್ಲಿ ಡಂಗೂರ ಸಾರಿಸಿ ಜನರಿಗೆ ಸೂಚನೆ ನೀಡಲಾಗಿದೆ. ನಿಮಿಷಾಂಭ ದೇಗುಲದ ಸಮೀಪದ ನದಿ ಬಳಿಗೆ ತೆರಳದಂತೆ ಬ್ಯಾರಿಕೇಡ್ ಅಳವಡಿಸಿ ಮೈಕ್ ಮೂಲಕ ಎಚ್ಚರಿಕೆ ನೀಡಲಾಗಿದೆ. ಸಂಗಮದಲ್ಲಿ ಅಸ್ಥಿ ವಿಸರ್ಜನೆಗೆ ಬಂದವರಿಗೆ ನದಿಗಿಳಿಯದಂತೆ‌ ತಿಳಿಸಲಾಗಿದೆ.

Last Updated : Jul 10, 2022, 1:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.