ಮಂಡ್ಯ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದರೆ ಜಿಲ್ಲೆಯ ಶ್ರೀರಂಗಪಟ್ಟಣದ ಮಹದೇವಪುರದಲ್ಲಿ ಫೇಲ್ ಆದ ಕಾರಣ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮಂಡ್ಯದ ಸಾಂತೋಂ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದಿದ್ದಳು. ಈಕೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತದಲ್ಲಿ ಅನುತ್ತೀರ್ಣಳಾಗಿದ್ದಾಳೆ ಎಂದು ಹೇಳಲಾಗ್ತಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ