ಮಂಡ್ಯ: ಪ್ರಾಥಮಿಕ ಆರೋಗ್ಯ ಕೇಂದ್ರದ 10 ಮಂದಿ ಕೊರೊನಾ ವಾರಿಯರ್ ಸೇರಿದಂತೆ ಜಿಲ್ಲೆಯಲ್ಲಿ ಸೋಮವಾರ 39 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಮಂಡ್ಯ- 9, ಮಳವಳ್ಳಿ- 6, ಮದ್ದೂರು- 4, ಶ್ರೀರಂಗಪಟ್ಟಣ- 15, ನಾಗಮಂಗಲ- 4 ಹಾಗೂ ಒಂದು ಮೈಸೂರು ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ 10 ಸಿಬ್ಬಂದಿಯಲ್ಲಿ ಸೋಂಕು ಕಂಡು ಬಂದಿದೆ.
ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 557 ಪ್ರಕರಣಗಳು ದಾಖಲಾಗಿವೆ.