ETV Bharat / state

ಕೆಆರ್​ಎಸ್​ನಿಂದ ತಮಿಳುನಾಡಿಗೆ 75 ಟಿಎಂಸಿ ನೀರು

ರಾಜ್ಯದಲ್ಲಿ ಎರಡು ತಿಂಗಳ ಅವಧಿಯಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆಆರ್​ಎಸ್​ ಜಲಾಶಯದಿಂದ ಸುಮಾರು 75 ಟಿಎಂಸಿಯಷ್ಟು ನೀರನ್ನು ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಬಿಡಲಾಗಿದೆ.

75-tmc-water-has-been-released-from-krs-reservoir-to-tamil-nadu
ಕೆಆರ್​ಎಸ್​ನಿಂದ ತಮಿಳುನಾಡಿಗೆ 75 ಟಿಎಂಸಿ ನೀರು
author img

By

Published : Jul 26, 2022, 3:38 PM IST

ಮಂಡ್ಯ : ರಾಜ್ಯದಲ್ಲಿ ಜುಲೈನಲ್ಲಿ ಉತ್ತಮ ಮಳೆಯಾದ ಕಾರಣ ಎರಡು ತಿಂಗಳುಗಳ (ಜೂನ್‌ ಮತ್ತು ಜುಲೈ) ಅವಧಿಯಲ್ಲಿ ಸುಮಾರು 75 ಟಿಎಂಸಿ ಅಡಿಗಳಷ್ಟು ನೀರು ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಹರಿದು ಹೋಗಿದೆ.

ಜೂನ್‌ನಲ್ಲಿ ನಿಗದಿತ ಸಮಯಕ್ಕೆ ಮಳೆ ಬಾರದ ಕಾರಣ ಈ ಬಾರಿ ರಾಜ್ಯ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇತ್ತು. ಆದರೆ, ಜುಲೈನಲ್ಲಿ ವಾಡಿಕೆಗಿಂತಲೂ ಅಧಿಕ ಮಳೆಯಾಗಿದ್ದರಿಂದ ತಮಿಳುನಾಡಿಗೆ ಹರಿಸಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರು ಹರಿದು ಹೋಗಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಜೂನ್‌ ಮತ್ತು ಜುಲೈ ನಲ್ಲಿ ತಮಿಳುನಾಡಿಗೆ 35 ಟಿಎಂಸಿ ಅಡಿಗಳಷ್ಟು ನೀರು ಬಿಡಬೇಕು.

ಜುಲೈನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದರಿಂದ ಈ ಎರಡು ತಿಂಗಳಲ್ಲಿ 75 ಟಿಎಂಸಿ ಅಡಿಗಳಷ್ಟು ನೀರು ತಮಿಳುನಾಡಿಗೆ ಹರಿದು ಹೋಗಿದೆ. ಆಗಸ್ಟ್‌ನಲ್ಲಿ 50 ಟಿಎಂಸಿ ಅಡಿಯಷ್ಟು ನೀರು ಬಿಡಬೇಕು. ಒಂದು ವೇಳೆ ಆಗಸ್ಟ್‌ನಲ್ಲಿ ಮಳೆ ಕಡಿಮೆಯಾದರೂ ಜುಲೈನಲ್ಲಿ ಹೆಚ್ಚುವರಿ ನೀರು ಬಿಟ್ಟಿರುವುದರಿಂದ ಲೆಕ್ಕಾಚಾರ ಸರಿದೂಗಿಸಿದಂತಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕೆಆರ್​ಎಸ್​ನಿಂದ ತಮಿಳುನಾಡಿಗೆ 75 ಟಿಎಂಸಿ ನೀರು

ಕಾವೇರಿ ಜಲಾನಯದ ನಾಲ್ಕು ಜಲಾಶಯಗಳ ನೀರು ಸಂಗ್ರಹದ ಒಟ್ಟು ಸಾಮರ್ಥ್ಯ 114.57 ಟಿಎಂಸಿ ಅಡಿಗಳು ಇದ್ದು, ಸೋಮವಾರ (ಜುಲೈ 25) ಒಟ್ಟು 113.40 ಟಿಎಂಸಿ ಅಡಿ ನೀರು ಸಂಗ್ರಹವಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 86.74 ಟಿಎಂಸಿ ಅಡಿ ನೀರು ಸಂಗ್ರಹವಿತ್ತು. ಈ ಜಲಾಶಯಗಳಲ್ಲಿ ನೀರಿನ ಒಳಹರಿವು 29,051 ಕ್ಯೂಸೆಕ್‌ ಇದ್ದರೆ, ಹೊರ ಹರಿವು 21,718 ಕ್ಯೂಸೆಕ್‌ಗಳಿವೆ. ಜುಲೈ 1 ರಿಂದ ಇಲ್ಲಿಯವರೆಗೆ ಒಳಹರಿವು 161 ಟಿಎಂಸಿ ಅಡಿಗಳು ಮತ್ತು ಇದೇ ಅವಧಿಯಲ್ಲಿ ಹೊರ ಹರಿವು 110 ಟಿಎಂಸಿ ಅಡಿಗಳು ಎಂದು ಜಲಸಂಪನ್ಮೂಲ ಇಲಾಖೆಯ ಮೂಲಗಳು ಹೇಳಿವೆ.

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾದ ಹಾರಂಗಿಯಲ್ಲಿ 7.91 ಟಿಎಂಸಿ ಅಡಿ, ಹೇಮಾವತಿಯಲ್ಲಿ 37.10 ಟಿಎಂಸಿ ಅಡಿ, ಕೆಆರ್‌ಎಸ್‌ನಲ್ಲಿ 49.28 ಟಿಎಂಸಿ ಅಡಿ ಮತ್ತು ಕಬಿನಿಯಲ್ಲಿ 19.40 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ ಎಂದು ಹೇಳಲಾಗಿದೆ.

ಓದಿ : ಆರ್​ಟಿಓ ದಂಡ ವಸೂಲಿ ಆರೋಪ.. ಸಾರಿಗೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ಲಕ್ಷ್ಮೀ ಹೆಬ್ಬಾಳ್ಕರ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.