ETV Bharat / state

ಮಂಡ್ಯ: ದೇವಸ್ಥಾನದಲ್ಲಿ ಕುಸಿದುಬಿದ್ದು 8 ತಿಂಗಳ ಗರ್ಭಿಣಿ ಸಾವು

ಗುರುವಾರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಗರ್ಭಿಣಿಯೋರ್ವಳು ಕುಸಿದು ಬಿದ್ದಿದ್ದಾರೆ. ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಗರ್ಭಿಣಿ ಸಾವು
ಗರ್ಭಿಣಿ ಸಾವು
author img

By

Published : Mar 5, 2022, 2:58 PM IST

ಮಂಡ್ಯ : ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ (26) ಮೃತರು.

ಇವರಿಗೆ ಒಂದೂವರೆ ವರ್ಷದ ಗಂಡು ಮಗುವಿದ್ದು, ಎರಡ ಬಾರಿಗೆ ಎಂಟು ತಿಂಗಳ ಗಂಭಿಣಿರ್ಯಾಗಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್ ಕುಟುಂಬದವರ ಜತೆಗೂಡಿ ಕಾರಿನಲ್ಲಿ ಆಗಮಿಸಿದ್ದರು.

ಗುರುವಾರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತು. ಆದ್ರೆ ಅಷ್ಟರಲ್ಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಶುಕ್ರವಾರ ಬೆಳಗ್ಗೆ ತಹಶೀಲ್ದಾರ್ ಎಂ.ವಿಜಯಣ್ಣ ಶವ ಮಹಜರು ನಡೆಸಿ ಕುಟುಂಬದವರಿಂದ ಮಾಹಿತಿ ಪಡೆದರು. ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಯಿತು. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.