ಮಂಡ್ಯ: ಮಂಡ್ಯ ಮೆಡಿಕಲ್ ಕಾಲೇಜಿನ ಒಂಬತ್ತು ವಿದ್ಯಾರ್ಥಿನಿಯರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಲ್ಲಿ 6 ವಿದ್ಯಾರ್ಥಿನಿಯರು ಕೇರಳದವರಾಗಿದ್ದಾರೆ ಎಂದು ಕಾಲೇಜಿನ ನಿರ್ದೇಶಕ ಹರೀಶ್ ತಿಳಿಸಿದರು.
ಡಿಸೆಂಬರ್ 8 ರಂದು ಕೇರಳಕ್ಕೆ ತೆರಳಿ ಡಿ.4ರಂದು ಮಂಡ್ಯಕ್ಕೆ ವಾಪಸಾಗಿದ್ದ ವಿದ್ಯಾರ್ಥಿನಿಯರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಮೂವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ವಿದ್ಯಾರ್ಥಿನಿಲಯದ 145 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಮತ್ತೆ ಆರು ಮಂದಿಗೆ ಸೋಂಕು ದೃಢಪಟ್ಟಿದೆ.
ಸೋಂಕಿತ 9 ವಿದ್ಯಾರ್ಥಿನಿಯರನ್ನು ಮಹಿಳಾ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಕೇರಳದಿಂದ ಬರುವಾಗ ನೆಗೆಟಿವ್ ರಿಪೋರ್ಟ್ ತಂದಿದ್ದಾರೆ. ಇಲ್ಲಿಗೆ ಬಂದ ಏಳು ದಿನಗಳ ನಂತರ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಸೋಂಕಿತ ವಿದ್ಯಾರ್ಥಿನಿಯರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ. ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ ಎಂದು ಹರೀಶ್ ಹೇಳಿದರು.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಶಸ್ತ್ರಸಜ್ಜಿತ ಅಪ್ಗ್ರೇಡೆಡ್ ಕಾರು: ಬೆಲೆ, ವಿಶೇಷತೆ ಹೀಗಿದೆ..